Friday, April 11, 2025
ರಾಜ್ಯಶಿಕ್ಷಣ

BREAKING NEWS : ರಾಜ್ಯದಲ್ಲಿ ಜ.1ರಿಂದ 10 ಮತ್ತು 12ನೇ ತರಗತಿ ಪುನರಾರಂಭ – ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕಾಲೇಜುಗಳ ಆರಂಭದ ನಂತ್ರ, ಶಾಲಾ-ಕಾಲೇಜು ಯಾವಾಗ ಆರಂಭಗೊಳ್ಳಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು. ಇಂತಹ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಫಿಕ್ಸ್ ಮಾಡಲಿದ್ದಾರೆ. ಜನವರಿ 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿರುವುದಾಗಿ ಘೋಷಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಸಿಎಂ ಯಡಿಯೂರಪ್ಪ, 2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಮಾಡಲಾಗುತ್ತಿದೆ. ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದ ಎಂಬುದಾಗಿ ಇಂದು ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ