Wednesday, April 16, 2025
ಹೆಚ್ಚಿನ ಸುದ್ದಿ

ಮಮತಾ ಬ್ಯಾನರ್ಜಿಗೆ ಶಾಕ್ ಕೊಟ್ಟ ಟಿಎಂಸಿಯ ನಾಲ್ವರು ಶಾಸಕರು- ಕಹಳೆ ನ್ಯೂಸ್

ಕೋಲ್ಕತ್ತಾ:ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಶಾಸಕರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಒಬ್ಬರಾದ ನಂತರ ಮತ್ತೊಬ್ಬರಂತೆ ಪಕ್ಷ ತೊರೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂವರು ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಮತ್ತೋರ್ವ ಶಾಸಕರು ಸಹ ದೀದಿಗೆ ಗುಡ್ ಬೈ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಿಲ್ಭದ್ರ ದತ್ತ ಶುಕ್ರವಾರ ಬೆಳಿಗ್ಗೆ ಟಿಎಂಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅದಕ್ಕೂ ಮುನ್ನ ಸುವೇಂದು ಅಧಿಕಾರಿ ಹಾಗೂ ಜಿತೇಂದ್ರ ತಿವಾರಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು.ಹಾಗೆ ಟಿಎಂಸಿ ಶಾಸಕ ಬನಶ್ರೀ ಮೈಟಿ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಇಮೇಲ್ ಮೂಲಕ ತಮ್ಮ ರಾಜೀನಾಮೆ ಪತ್ರವನ್ನು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರವಾನಿಸಿರುವುದಾಗಿ ಹೇಳಿದ್ದಾರೆ. ಇದರೊಂದಿಗೆ ಕಳೆದ 48 ಗಂಟೆಗಳಲ್ಲಿ ಟಿಎಂಸಿಯ ನಾಲ್ವರು ಶಾಸಕರು ರಾಜೀನಾಮೆ ನೀಡಿದಂತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ