Recent Posts

Monday, January 20, 2025
ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನ – ಕಹಳೆ ನ್ಯೂಸ್

ಮಂಗಳೂರು: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಪನ್ನಗೊಂಡಿತು. ಐತಿಹಾಸಿಕ ಕ್ಷಣಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.

ಭಾನುವಾರ ಬೆಳಗ್ಗೆ 7.25ರ ಧನುರ್ ಲಗ್ನದಲ್ಲಿ ರಥಾರೂಢನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ತುಂಬಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.ಕೋವಿಡ್ ಹಿನ್ನಲೆ ಅನ್ಯ ಜಿಲ್ಲೆ ಮತ್ತು ಅನ್ಯ ರಾಜ್ಯದ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ಪಾಸ್ ಇದ್ದವರಿಗೆ ಮಾತ್ರ ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಜಿಲ್ಲಾಡಳಿತ ನಿಯಮಕ್ಕೂ ಕ್ಯಾರೆ ಅನ್ನದೆ ಕುಕ್ಕೆ ದೇವಳದ ರಥಬೀದಿಯಲ್ಲಿ ಜನಸಾಗರ ಸೇರಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು