Wednesday, January 22, 2025
ಹೆಚ್ಚಿನ ಸುದ್ದಿ

ಸೌದಿ ಅರೇಬಿಯಾ: ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ – ಕಹಳೆ ನ್ಯೂಸ್

ದುಬೈ: ಸೌದಿ ಅರೇಬಿಯಾವು ಕೊರೊನಾ ಸೋಂಕಿನ ಹೊಸ ರೂಪಾಂತರವನ್ನು ಹರಡದಂತೆ ತಡೆಯಲು ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಿದೆ.

ಅಂತರರಾಷ್ಟ್ರೀಯ ವಿಮಾನ ಸೇವೆಯನ್ನು ಒಂದು ವಾರದ ತನಕ ಸ್ಥಗಿತಗೊಳಿಸಲಾಗಿದೆ. ವೈರಸ್‌ನ ಸ್ವರೂಪದ ಬಗ್ಗೆ ವೈದ್ಯಕೀಯ ಮಾಹಿತಿ ಲಭ್ಯವಾಗುವವರೆಗೂ ಅಂತರರಾಷ್ಟ್ರೀಯ ವಿಮಾನ ಸೇವೆಯ ಮೇಲಿನ ನಿರ್ಬಂಧವನ್ನು ಮುಂದುವರಿಸುವ ಸಾಧ್ಯತೆಯಿದೆ’ ಎಂದು ಸೌದಿ ಅರೇಬಿಯಾದ ಆಂತರಿಕ ಸಚಿವಾಲಯವು ತಿಳಿಸಿದೆ. ಅಷ್ಟೆ ಅಲ್ಲದೆ ಸೌದಿ ಅರೇಬಿಯಾವು ಭೂ ಮತ್ತು ಜಲ ಮಾರ್ಗಗಳನ್ನು ಒಂದು ವಾರದವರೆಗೆ ಮುಚ್ಚಿದೆ. ಕಳೆದ ಮೂರು ತಿಂಗಳಲ್ಲಿ ಐರೋ‍ಪ್ಯ ರಾಷ್ಟ್ರಗಳಿಂದ ಬಂದವರು ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ ಸರಕು ಸಾಗಣೆ ವಿಮಾನ ಸೇವೆಗಳು ಎಂದಿನಂತೆ ಇರಲಿವೆ ಎಂದು ಸಚಿವಾಲಯವು ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು