ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರದ ವಿರುದ್ಧ ಒಂದಲ್ಲ ಒಂದು ಆರೋಪವನ್ನು ಮಾಡುತ್ತಲೇ ಇದ್ದಾರೆ.
ಇದೀಗ ಖಾಸಗಿ ಶಾಲೆಗಳ ಜೊತೆಗೆ ಬಿಜೆಪಿ ಸರ್ಕಾರ ಶಾಮೀಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮತ್ತು ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲದಂತಾಗಿದೆ. ಶಾಲೆಗಳು ಆರಂಭಗೊಳ್ಳದಿದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ ಮಾಡಲಾಗುತ್ತಿದೆ. ಅಲ್ಲದೆ, ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ, ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಇಷೇಲ್ಲ ನಡೆದರೂ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿದೆ ಎಂದು ಟೀಕಿಸಿದರು. ಹಾಗೆಯೇ ತರಗತಿಗಳು ನಡೆಯದೆ ಇದ್ದರೂ ಬೋದನಾ ಶುಲ್ಕದ ಜೊತೆಗೆ, ಪ್ರಯೋಗ ಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶುಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳು ಬೆದರಿಕೆಗೆ ಜಗ್ಗುತ್ತಿಲ್ಲ ಎಂದು ಹೇಳಿದ್ದಾರೆ.