Monday, January 20, 2025
ಬಂಟ್ವಾಳ

ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಮದ್ಯದಂಗಡಿ ಬಂದ್ – ಕಹಳೆ ನ್ಯೂಸ್

ಬಂಟ್ವಾಳ: 2020 ಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ ಜಿಲ್ಲೆಯ ಮಂಗಳೂರು, ಮೂಡುಬಿದ್ರೆ ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ಡಿಸೆಂಬರ್ 20 ರಂದು ಸಂಜೆ 5 ಗಂಟೆಯಿಂದ ಡಿಸೆಂಬರ್ 22 ರಂದು ಮಧ್ಯರಾತ್ರಿ 12 ಗಂಟೆಯವರಗೆ ,

ಜಾಹೀರಾತು
ಜಾಹೀರಾತು
ಜಾಹೀರಾತು

ಮತ್ತು ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ, 27 ರಂದು ಮಧ್ಯರಾತ್ರಿ 12 ಗಂಟೆವರೆಗೆ ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಹಾಗೂ ಮತ ಎಣಿಕೆಯ ಸಲುವಾಗಿ ಡಿಸೆಂಬರ್ 29 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 30 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ನಡೆಯುವ ಪ್ರದೇಶದ 5 ಕಿ.ಮೀ ವ್ಯಾಪ್ತಿಯನ್ನು ಮದ್ಯ ಮುಕ್ತ ದಿನಗಳೆಂದು ಘೋಷಿಸಿ ಈ ದಿನಗಳಲ್ಲಿ ಎಲ್ಲಾ ವಿಧಧ ಮದ್ಯದಂಗಡಿಗಳನ್ನು ಹಾಗೂ ಇನ್ನುಳಿದ ಯಾವುದೇ ವಿಧಧ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಮತ್ತು ಮಾರಾಟ ಕೇಂದ್ರಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿರುತ್ತಾರೆ. ಈ ದಿನಗಳಲ್ಲಿ ಚುನವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಸೂಚಿತ ಅವಧಿಯಲ್ಲಿ ಯಾವುದೇ ಹೊಟೇಲ್‍ಗಳಲ್ಲಾಗಲೀ ನಾನ್ ಪ್ರೊಪ್ರೈಟರ್‍ಗಳಲ್ಲಿ ಸ್ಟಾರ್ ಹೊಟೇಲ್‍ಗಳಲ್ಲಾಗಲೀ ವ್ಯಾಪ್ತಿಗೊಳಪಟ್ಟ ವೈನ್ ಶಾಪ್, ಬಾರ್‍ಗಳಲ್ಲಿ ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ಕೂಡ ನಿಷೇಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು