Recent Posts

Monday, January 20, 2025
ಬಂಟ್ವಾಳ

ಬಂಟ್ವಾಳ ತಾಲೂಕಿನಲ್ಲಿ ಇಂದು ಗ್ರಾಮ‌ ಪಂಚಾಯತ್ ಚುನಾವಣಾ ಮತದಾನಕ್ಕೆ ಕ್ಷಣಗಣನೆ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗಳಲ್ಲಿ‌ ಇಂದು ನಡೆಯುವ ಮತದಾನಕ್ಕೆ ತಾಲೂಕಾಡಳಿತ ಸಿದ್ದಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ 396 ಮತಗಟ್ಟೆಗಳಿಗೆ ಮತಪೆಟ್ಟಿಗೆಗಳು ಮತ್ತು ಬ್ಯಾಲೆಟ್ ಪೇಪರ್ ಗಳೂ ಸಿದ್ದವಾಗಿದ್ದು, ಮತದಾರರು ಬಂದು ತಮ್ಮ ಹಕ್ಕು ಚಲಾಯಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ . ಹಾಗೆಯೇ ಬೆಳಿಗ್ಗೆ 7ಗಂಟೆಯಿಂದ 5 ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಮತಗಟ್ಟೆ ಅಧಿಕಾರಿಗಳಿಗೆ ಬೇಕಾಗುವ ಚುನಾವಣಾ ಸಾಮಾಗ್ರಿಗಳನ್ನು ಹಂಚಿಕೆ ಮಾಡಲಾಗಿದೆ. ಹಾಗೆಯೇ ಗ್ರಾಮ ಪಂಚಾಯತಿ ಚುನಾವಣೆಗೆ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕೆಂದು ಜನತೆಯಲ್ಲಿ ವಿನಂತಿಸುತ್ತೇನೆ ಎಂದು ಬಂಟ್ವಾಳದಲ್ಲಿ‌ ಚುನಾವಣೆ ಉಸ್ತುವಾರಿ ನೋಡಿಕೊಳ್ಳಲು ಆಗಮಿಸಿದ ಮಂಗಳೂರು ಸಹಾಯಕ ಕಮೀಷನರ್ ಮದನ್ ಮೋಹನ್ ಹೇಳಿದ್ದಾರೆ. ಹಾಗೆಯೇ ಬಂಟ್ವಾಳ ತಾಲೂಕಿನ 396 ಮತಗಟ್ಟೆಗಳಲ್ಲಿ 57 ಗ್ರಾಮ ಪಂಚಾಯತಿಗಳ 822 ಸ್ಥಾನಗಳಿಗೆ ನಡೆಯಲಿದ್ದು, ಒಟ್ಟು 2,75,095 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಹಾಗೂ ಮತಗಟ್ಟೆ ಸಿಬಂದಿ ಆಯಾಯ ಮತಗಟ್ಟೆಗಳಿಗೆ ತೆರಳುವ ದೃಷ್ಟಿಯಿಂದ 155 ವಾಹನಗಳನ್ನು ನಿಗದಿ ಪಡಿಸಲಾಗಿತ್ತು. ಮತಪೆಟ್ಟಿಗೆಗಳ ಸಾಗಾಟ ಕಾರ್ಯವನ್ನು ಸಹಾಯಕ ಕಮೀಷನರ್ ಮದನ್ ಮೋಹನ್ ಪರಿಶೀಲಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಹಸೀಲ್ದಾರ್ ಅನಿತಾಲಕ್ಷ್ಮಿ, ಚುನಾವಣಾ ಶಾಖೆ ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ದಿವಾಕರ್ ಮುಗುಳ್ಯ, ಚುನಾವಣಾ ಶಾಖೆಯ ಸಿಬ್ಬಂದಿ ರಾಜ್ ಕುಮಾರ್ ಉಪಸ್ಥಿತರಿದ್ದು, ಪೂರಕ ಮಾಹಿತಿ ನೀಡಿದರು. ಹಾಗೂ ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ಎಸ್ಸೈಗಳಾದ ಅವಿನಾಶ್, ವಿನೋದ್ ರೆಡ್ಡಿ, ಸೌಮ್ಯಾ, ಪ್ರಸನ್ನ, ಕಲೈಮಾರ್, ಸಂಜೀವ ಅವರ ಮುಂದಾಳತ್ವದಲ್ಲಿ ಸಿಬ್ಬಂದಿ ಕೆಎಸ್ಸಾರ್ಪಿ ತುಕಡಿಗಳೊಂದಿಗೆ ಈಗಾಗಲೇ ಬಂದೋಬಸ್ತ್ ನಡೆಸುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು