Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಮಾಜಿಕ ಜಾಲತಾಣದ ಮೂಲಕ ಲವ್ ಜಿಹಾದ್ ಗೆ ಯತ್ನ ; ದೂರು ನೀಡಿದ ಕೆಲವೇ ಕ್ಷಣಗಳಲ್ಲಿ ಎಫ್.ಐ. ಆರ್ ದಾಖಲಿಸಿ ಆರೋಪಿ ಸೊಯೂಬ್ ಕೊತ್ವಾಲ್ ಫೀಸ್ ಕಟ್ ಮಾಡಿದ ಬೆಳ್ಳಾರೆ ಪೋಲೀಸ್ ಸಬ್ ಇನ್ಫೆಕ್ಟರ್ ಅಂಜನೇಯ ರೆಡ್ಡಿ..! – ಕಹಳೆ ನ್ಯೂಸ್

ಪುತ್ತೂರು :ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯೊಬ್ಬಳಿಗೆ ಪ್ರೀತಿಸುವಂತೆ ಹಾಗೂ ಮತಾಂತರಕ್ಕೆ ಒತ್ತಾಯಿಸಿದ ಆರೋಪದ ಮೇಲೆ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಡಬ ತಾಲೂಕಿನ ಸವಣೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂದು ಗುರುತಿಸಲಾಗಿದ್ದು, ಸವಣೂರಿನ‌ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿರುವ ಆರೋಪಿ ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ, ಅಲ್ಲದೇ ಅಸಭ್ಯವಾಗಿ ಸಂದೇಶ ರವಾನಿಸುತ್ತಿದ್ದ, ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸುತ್ತಿದ್ದ ಎಂದು ಬಾಲಕಿ ಆರೋಪಿಸಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆಯ ಪ್ರಮುಖರು ಯುವತಿಯ ಮನೆಗೆ ತೆರಳಿ ಈ ವಿಚಾರದ ಸತ್ಯಾಸತ್ಯತೆಯನ್ನು ತಿಳಿದ ಬಳಿಕ ಪೊಲೀಸ್ ಇಲಾಖೆಗೆ ದೂರು ನೀಡಲಾಗಿತ್ತು. ಸೋಯೂಬ್ ಯುವತಿಗೆ ಮೆಸೆಜ್ ಮೂಲಕ ಕಿರುಕುಳ ಹಾಗೂ ಉಡುಗೊರೆ ಪಡೆಯುವಂತೆ ಒತ್ತಾಯಿಸುತ್ತಿದ್ದ ಎಂಬುದು ಮೊಬೈಲ್ ಸಂದೇಶಗಳಲ್ಲಿ ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೂರದ ಜಿಲ್ಲೆಯಿಂದ ಉದ್ಯೋಗ ನಿಮಿತ್ತ ಬಂದಿರುವ ಸೋಯೂಬ್ ಯುವತಿಯನ್ನು ಯಾಮಾರಿಸಿ ಲವ್‌ಜೆಹಾದ್ ಖೆಡ್ಡಾಗೆ ಉರುಳಿಸಲು ಪ್ರಯತ್ನಿಸಿದ್ದ ಎನ್ನಲಾಗಿದ್ದು,ಹಿಂದೂ ಯುವತಿಯರನ್ನು ಉಪಾಯವಾಗಿ ಮತಾಂತರಗೊಳಿಸುವ ಹುನ್ನಾರ ಸದ್ದಿಲ್ಲದೆ ನಡೆಯುತ್ತಿದ್ದು,ಈ ಕುರಿತು ಯುವತಿಯರು ಜಾಗರೂಕರಾಗಿರುವಂತೆ ಹಿಂದೂ ಜಾಗರಣ ವೇದಿಕೆ ವಿನಂತಿಸಿದೆ‌. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ.