Recent Posts

Sunday, January 19, 2025
ಸುದ್ದಿ

ನೆಲ್ಯಾಡಿ: ಗ್ರಾ.ಪಂ ಚುನಾವಣೆಯ ಬಿಜೆಪಿ ಅಭ್ಯರ್ಥಿ ಹೃದಯಾಘಾತದಿಂದ ಸಾವು – ಕಹಳೆ ನ್ಯೂಸ್

ನೆಲ್ಯಾಡಿ: ಡಿ.27ರಂದು ನಡೆಯಲಿದ್ದ ಗ್ರಾ.ಪಂ. ಚುನಾವಣೆಗೆ ಸಂಬಂಧಿಸಿದಂತೆ ನೆಲ್ಯಾಡಿ ಗ್ರಾಮ ಪಂಚಾಯಿತಿ 2ನೇ ವಾರ್ಡ್‌ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್(60ವ.)ರವರು ಡಿ.22ರಂದು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಡಿ.22ರಂದು ಹಗಲು ವೇಳೆ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಬ್ದುಲ್ ಹಮೀದ್‌ರವರಿಗೆ ತಡರಾತ್ರಿ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಮನೆಯವರು ತಕ್ಷಣ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ದಾರಿಮಧ್ಯೆ ಅವರು ಮೃತಪಟ್ಟಿರುತ್ತಾರೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಬ್ದುಲ್ ಹಮೀದ್‌ರವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಕಳೆದ ಅವಧಿಯಲ್ಲಿ ನೆಲ್ಯಾಡಿ ಗ್ರಾ.ಪಂ.ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದರು. ಆದರೆ ಈ ಬಾರಿ ಅವರು ಬಿಜೆಪಿಗೆ ಸೇರ್ಪಡೆಗೊಂಡು ಬಿಜೆಪಿ ಅಭ್ಯರ್ಥಿಯಾಗಿ ನೆಲ್ಯಾಡಿ ಗ್ರಾ.ಪಂ.ನ 2ನೇ ವಾರ್ಡ್‌ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಇವರು ಆರ್ಟಿಸ್ಟ್ ಆಗಿದ್ದು ಗೋಡೆ ಬರಹ, ನಾಮಫಲಕ ಬರೆಯುವ ಕೆಲಸ ಮಾಡುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು