Wednesday, January 22, 2025
ಹೆಚ್ಚಿನ ಸುದ್ದಿ

ಕರ್ಫ್ಯೂ ವೇಳೆ ಬಾರ್, ಪಬ್ ಮುಚ್ಚದಿದ್ದರೆ ಅಬಕಾರಿ ಪರವಾನಗಿ ರದ್ದು; ಸಚಿವರ ಖಡಕ್​ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು : ಕರ್ಫ್ಯೂ ಸಂದರ್ಭದಲ್ಲಿ ಬಾಗಿಲು ಮುಚ್ಚದಿರುವ ಪಬ್ ಹಾಗೂ ಮದ್ಯದಂಗಡಿಗಳ ಪರವಾನಗಿಯನ್ನೇ ಅಮಾನತು ಮಾಡಲಾಗುವುದು ಎಂದು ಅಬಕಾರಿ ಇಲಾಖೆ ಸಚಿವ ಎಚ್. ನಾಗೇಶ್ ಎಚ್ಚರಿಕೆ ನೀಡಿದ್ದಾರೆ.

ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲು ಕಮಿಷನರ್‌ಗೆ ಸೂಚಿಸಿದ್ದೇನೆ. ಬ್ರಿಟನ್‌ನಲ್ಲಿ ಕಂಡುಬಂದಿರುವ ರೂಪಾಂತರಿ ಕರೊನಾ ತಡೆಯುವ ಸಲುವಾಗಿ ಸರ್ಕಾರ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ವಿಧಿಸಿದೆ. ಹಾಗಾಗಿ, ಎಲ್ಲ ಮದ್ಯದಂಗಡಿ ಮಾಲೀಕರು ಕಡ್ಡಾಯವಾಗಿ ರಾತ್ರಿ 10 ಗಂಟೆಯೊಳಗೆ ಪಬ್ ಹಾಗೂ ಬಾರ್‌ಗಳನ್ನು ಬಂದ್ ಮಾಡಬೇಕು. ಇಲ್ಲದಿದ್ದರೆ, ಅಬಕಾರಿ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಿತ್ಯ 30 ಕೋಟಿ ನಷ್ಟ: ಲಾಕ್‌ಡೌನ್ ಸಂದರ್ಭದಲ್ಲಿ ಇಲಾಖೆಗೆ ಅಂದಾಜು 2 ಸಾವಿರ ಕೋಟಿ ರೂ.ನಷ್ಟವಾಗಿತ್ತು. ಲಾಕ್‌ಡೌನ್ ತೆರವು ಬಳಿಕ ನಷ್ಟವಾಗಿರುವ ಆದಾಯದಲ್ಲಿ ಚೇತರಿಕೆ ಕಾಣುತ್ತಿತ್ತು. ಕಳೆದ ವರ್ಷದ ಈ ಅವಧಿಗೆ ಹೋಲಿಸಿದರೆ 300 ಕೋಟಿ ರೂ.ಆದಾಯದಲ್ಲಿ ಹಿಂದೆ ಇದ್ದೇವೆ. ಆದರೆ, ಇದೀಗ ಕರ್ಫ್ಯೂಯಿಂದ ಪ್ರತಿ ನಿತ್ಯ ಅಂದಾಜು 30 ಕೋಟಿ ರೂ. ಇಲಾಖೆಗೆ ನಷ್ಟವಾಗುತ್ತದೆ. ಆದರೆ ಸರ್ಕಾರ ನಿಯಮವನ್ನು ಪಾಲನೆ ಮಾಡಲೇಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು