Saturday, November 23, 2024
ಬಂಟ್ವಾಳ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿಸೆಂಬರ್ 23 ರಿಂದ 29ರವರೆಗೆ ದತ್ತ ಜಯಂತಿ ಮಹೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿಸೆಂಬರ್ 23 ರಿಂದ 29 ರವರೆಗೆ ದತ್ತ ಜಯಂತಿ ಮಹೋತ್ಸವವು ನಡೆಯುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ನಡೆದ ದತ್ತ ಜಯಂತಿ ಮಹೋತ್ಸವದಲ್ಲಿ ಶ್ರೀ ದತ್ತ ಮಹಾಯಾಗ ಸಪ್ತಾಹವು ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು ಶ್ರೀಗಳ ಷಷ್ಠ್ಯಬ್ದ ಸಂಭ್ರಮಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಸ್ವಾಮೀಜಿ ಚಾಲನೆ ನೀಡಿದರು. ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದ ಕೇಂದ್ರ ಸಮಿತಿ ಕಾರ್ಯಧ್ಯಕ್ಷ ಪದ್ಮನಾಭ ಕೊಟ್ಟಾರಿ ಅವರು ಒಡಿಯೂರು ಸಂಸ್ಥಾನದಿಂದ ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಯನ್ನು ಮೇಲೆ ತರುವ ನಿಟ್ಟಿನಲ್ಲಿಯೂ ಕೆಲಸ ಕಾರ್ಯಗಳು ನಡೆಯುತ್ತಿದೆ ಎಂದು ಹೇಳಿದರು. ಹಾಗೆ ಸಾಧ್ವೀ ಮಾತಾನಂದಮಯಿ ದಿವ್ಯ ಸಾನಿಧ್ಯ ವಹಿಸಿದ್ದರು.

ಹಾಗೂ ಷಷ್ಠ್ಯಬ್ದ ಕಾರ್ಯಕ್ರಮದ ಲಾಂಛನ, ಸಂಸ್ಥಾನದ ಮುಖವಾಣಿ ದತ್ತಪ್ರಕಾಶನ, ಸಂಸ್ಥಾನದ ಕ್ಯಾಲೆಂಡರ್ ಮತ್ತು 2021 ರ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು. ಮತ್ತು ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ವೇ| ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ- ಶ್ರೀ ದತ್ತ ಮಹಾಯಾಗ ಸಪ್ತಾಹದ ಆರಂಭ ನಡೆಯಿತು.ಮತ್ತು ದತ್ತಮಾಲಾಧಾರಣೆ ನಡೆಯಿತು.

ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ರೇವತಿ ವಾಮಯ್ಯ ಶೆಟ್ಟಿ, ಅಶೋಕ್ ಕುಮಾರ್ ಬಿಜೈ, ಮಂಗಳೂರು ವಲಯದ ಪ್ರಧಾನ ಕಾರ್ಯದರ್ಶಿ ತಾರಾನಾಥ ಶೆಟ್ಟಿ ಬೋಳಾರ್, ಮಂಗಳೂರು ವಲಯದ ಸಂಚಾಲಕ ನಾಗರಾಜ ಆಚಾರ್ಯ, ಪುತ್ತೂರು ವಲಯ ಪ್ರಧಾನ ಕಾರ್ಯದರ್ಶಿ ಹರಿಣಾಕ್ಷಿ ಜೆ ಶೆಟ್ಟಿ, ಮಲಾರ್ ಜಯರಾಮ ರೈ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಯಶವಂತ ವಿಟ್ಲ ನಿರೂಪಿಸಿದರು.ಮತ್ತು ನವನೀತ ಶೆಟ್ಟಿ ಕದ್ರಿ ಸ್ವಾಗತಿಸಿದ್ದು, ಜಯಪ್ರಕಾಶ್ ವಂದಿಸಿದರು.