Thursday, January 23, 2025
ಹೆಚ್ಚಿನ ಸುದ್ದಿ

ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಭಕ್ತರ ಸಂಖ್ಯೆ ಹೆಚ್ಚಳ ಆದೇಶ ಪ್ರಶ್ನಿಸಿ , ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ- ಕಹಳೆ ನ್ಯೂಸ್

ನವದೆಹಲಿ:ಕೇರಳ ಹೈಕೋರ್ಟ್ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ, ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ತೀರ್ಥಯಾತ್ರೆಗೆ ತೆರಳುವ ಭಕ್ತರ ಸಂಖ್ಯೆಯನ್ನು 5000ರವರೆಗೆ ಹೆಚ್ಚಿಸಿ,ಎಂದು ಕೇರಳ ಸರ್ಕಾರ ಸುಪ್ರೀಂ ಮೊರೆ ಹೋಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಯ್ಯಪ್ಪ ಸ್ವಾಮಿಯ ಸನ್ನಿಧಿಯಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಮಾಡಿರುವುದು, ಪೊಲೀಸ್‌ ಸಿಬ್ಬಂದಿ ಸೇರಿದಂತೆ ಆರೋಗ್ಯ ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಲಿದೆ ಎಂದು ತಿಳಿಸಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಬರುವ ದೈನಂದಿನ ತೀರ್ಥಯಾತ್ರಿಕರ ಸಂಖ್ಯೆಯನ್ನು ಪ್ರಾರಂಭದ ವಾರದ ದಿನಗಳಲ್ಲಿ 1000 ಮತ್ತು ವಾರಾಂತ್ಯದ ವೇಳೆ 2000 ಎಂದು ನಿಗದಿ ಮಾಡಲಾಗಿತ್ತು. ನಂತರ ದೇವಸ್ಥಾನದಿಂದ ಬರುವ ಆದಾಯ ಕಡಿಮೆಯಾದ ಕಾರಣ ದೇವಸ್ಥಾನವನ್ನು ನಿರ್ವಹಣೆ ಮಾಡುವ ತಿರುವಾಂಕೂರು ದೇವಸ್ವಂ ಮಂಡಳಿಯ ಮನವಿಯ ಮೇರೆಗೆ ಭಕ್ತರ ಸಂಖ್ಯೆಯನ್ನು 2000 ಮತ್ತು 3000ಕ್ಕೆ ಹೆಚ್ಚಳ ಮಾಡಲಾಗಿತ್ತು.ಆದರೆ ಡಿಸೆಂಬರ್ 20ರಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ತೀರ್ಥಯಾತ್ರೆಗೆ ತೆರಳುವ ಭಕ್ತರ ಸಂಖ್ಯೆಯನ್ನು 5000ದವರೆಗೆ ಹೆಚ್ಚಿಸಬೇಕು ಎಂದು ಇತ್ತೀಚೆಗೆ ಕೇರಳ ಹೈಕೋರ್ಟ್ ಆದೇಶ ಹೊರಡಿಸಿತ್ತು. ಕೇರಳ ಹೈಕೋರ್ಟ್‌, ಪೊಲೀಸ್‌ ಸಿಬ್ಬಂದಿ, ಆರೋಗ್ಯ ಅಧಿಕಾರಿಗಳ ಸಂಖ್ಯೆ ಹಾಗೂ ಶಬರಿಮಲೆಯಲ್ಲಿರುವ ಕೊರೊನಾ ಪೀಡಿತರ ಸಂಖ್ಯೆಯನ್ನು ಪರಿಗಣನೆಗೆ ತೆಗೆದುಕೊಳ್ಳದೇ ಈ ಆದೇಶವನ್ನು ನೀಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು