ರಾಜ್ಯದಲ್ಲಿ ಜನವರಿ 1 ರಿಂದ ಶಾಲೆ ಆರಂಭ : ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ – ಕಹಳೆ ನ್ಯೂಸ್
ಬೆಂಗಳೂರು : ಬ್ರಿಟನ್ ನ ಹೊಸ ತಳಿಯ ಕೊರೊನಾ ಸೋಂಕು ರಾಜ್ಯಕ್ಕೆ ಕಾಲಿಟ್ಟಿದೆ ಎನ್ನಲಾಗಿದ್ದು , ಕರುನಾಡಲ್ಲಿ ಆತಂಕದ ಛಾಯೆ ಮೂಡಿದೆ. ಇದರ ನಡುವೆ ರಾಜ್ಯ ಸರ್ಕಾರ ಶಾಲೆ ಆರಂಭಕ್ಕೆ ದಿನಾಂಕ ನಿಗದಿ ಮಾಡಿದೆ. ಜನವರಿ 1 ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿದೆ.
ಈ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಗಳಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.
‘1) ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಲಾರಂಭ ಬಗ್ಗೆ ಜಿಲ್ಲೆಗಳಲ್ಲಿ ಕ್ರಮ ತೆಗೆದುಕೊಳ್ಳಬೇಕು
2) ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಮಿತಿ ರಚನೆ ಮಾಡಬೇಕು
3) ಶಾಲೆ ಆರಂಭ, ಮುನ್ನೆಚ್ಚರಿಕೆ ಕ್ರಮ, ಶಾಲೆಗಳ ಸುವ್ಯವಸ್ಥೆ, ಕೋವಿಡ್ ಬಗ್ಗೆ ಸುರಕ್ಷತೆ ನೋಡಿಕೊಳ್ಳಬೇಕು
4) ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅನ್ಬುಕುಮಾರ್ ಆದೇಶ ಹೊರಡಿಸಿಸಿದ್ದಾರೆ.