Monday, January 20, 2025
ಹೆಚ್ಚಿನ ಸುದ್ದಿ

ಕೇಪು ಗ್ರಾಮದಲ್ಲಿ ಯುವಕನೊಬ್ಬ ಮಹಡಿಯಿಂದ ಬಿದ್ದು ಸಾವು- ಕಹಳೆ ನ್ಯೂಸ್

ವಿಟ್ಲ: ಯುವಕನೊಬ್ಬ ಸಂಬಂಧಿಕರ ಮನೆಯಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕೇಪು ಗ್ರಾಮದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇತ ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(೨೮) ಎಂದು ತಿಳಿದು ಬಂದಿದೆ. ಇವರು ಕೇಪು ಕುಕ್ಕೆಬೆಟ್ಟು ಸಂಬಂಧಿಕರ ಮನೆಯಲ್ಲಿ ಚಿನ್ನದ ಕೆಲಸ ನಿರ್ವಹಿಸುತ್ತಿದ್ದ ಪ್ರಸಾದ್ ಆಚಾರ್ಯ ಬುಧವಾರ ತಡರಾತ್ರಿ ಮಹಡಿಯಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ದಾರಿ ಮಧ್ಯೆ ಸಾವನ್ನಪ್ಪಿದ್ದರೆನ್ನಲಾಗಿದೆ. ನಂತರ ಮೃತ ದೇಹದ ಮರಣೋತ್ತರ ಪರೀಕ್ಷೆಯನ್ನು ದೇರಳಕಟ್ಟೆ ಆಸ್ಪತ್ರೆಯಲ್ಲಿ ನಡೆಸಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು