Sunday, January 19, 2025
ಬಂಟ್ವಾಳ

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ನಾಳೆ ಕಲ್ಲಡ್ಕಕ್ಕೆ ಭೇಟಿ – ಕಹಳೆ ನ್ಯೂಸ್

ಬಂಟ್ವಾಳ: ಕೇಂದ್ರ ರಸಗೊಬ್ಬರ ಖಾತೆ ಸಚಿವರೂ ಆಗಿರುವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ನಾಳೆ ಕಲ್ಲಡ್ಕ ಶ್ರೀ ರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲು ಆಗಮಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಾಳೆ ಮಧ್ಯಾಹ್ನ ಈ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಡಾ.ಪ್ರಭಾಕರ ಭಟ್ , ಇಫ್ಕೋ ನಿರ್ದೇಶಕ ಡಾ.ಎಂ.ಎನ್ ರಾಜೇಂದ್ರ ಕುಮಾರ್, ಇಫ್ಕೋ ರಾಜ್ಯ ಮಾರಾಟ ವ್ಯವಸ್ಥಾಪಕ ಡಾ.ಸಿ. ನಾರಾಯಣಸ್ವಾಮಿ, ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಸಂಚಾಲಕ ವಸಂತ ಮಾಧವ , ಬೆಂಗಳೂರು ಸದಾಶಿವ ಫೌಂಡೇಶನ್ ಅಧ್ಯಕ್ಷ ಡಾ‌.ಶಿವರಾಮ್, ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಉಪಸ್ಥಿತರಿದ್ದರು ಎಂದು ಪ್ರಿನ್ಸಿಪಲ್ ಕೃಷ್ಣಪ್ರಸಾದ ಕಾಯರ್ ಕಟ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ರು.

ಜಾಹೀರಾತು
ಜಾಹೀರಾತು
ಜಾಹೀರಾತು