ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ-ಕಹಳೆ ನ್ಯೂಸ್
ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಧರ್ಮೇಗೌಡ ಅವರು ನಿನ್ನೆ ಸಂಜೆ ಮನೆಯಿಂದ ತಮ್ಮ ಸ್ಯಾಂಟ್ರೋ ಕಾರಿನಲ್ಲಿ ಒಬ್ಬರೇ ಹೊರಟ್ಟಿದ್ದು ರಾತ್ರಿಯಾದರೂ ಹಿಂದಿರುಗಿ ಬಂದಿರಲಿಲ್ಲ. ಈ ಕಾರಣ ಗನ್ ಮ್ಯಾನ್, ಪೊಲೀಸರು , ಸ್ಥಳೀಯರು ಹುಡುಕಾಟ ನಡೆಸಿದ್ದು ಕಡೂರು ತಾಲೂಕಿನ ಗುಣಸಾಗರ ರೈಲು ಹಳಿಯ ಮೇಲೆ ಇಂದು ಬೆಳಗ್ಗಿನ ಜಾವ ಎಸ್.ಎಲ್. ಧರ್ಮೇಗೌಡ ಅವರ ಮೃತದೇಹ ಪತ್ತೆಯಾಗಿದೆ. ಇನ್ನು ಈ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ಅವರ ಮೃತ ದೇಹದ ಜೊತೆ ಡೆತ್‍ನೋಟ್ ಕೂಡಾ ಪತ್ತೆಯಾಗಿದ್ದು, ಅಷ್ಟೇ ಅಲ್ಲದೆ ಅವರು ತಮ್ಮ ಪರಿಚಯಸ್ಥರಿಗೆ ಕರೆ ಮಾಡಿ ರೈಲಿನ ಸಮಯದ ಬಗ್ಗೆ ಕೇಳಿದ್ದರು ಎಂದು ಕೂಡಾ ಹೇಳಲಾಗಿದೆ.