ಮೈಸೂರು: ಪ್ರತೀ ವರ್ಷ ಹೊಸವರ್ಷದ ದಿನ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಾರೆ.
ಆದರೆ ಈ ವರ್ಷ ಕೊರೊನಾ ಸಾಂಕ್ರಾಮಿಕದ ಭೀತಿಯಿರುವ ಕಾರಣ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದು, ಕಟ್ಟು ನಿಟ್ಟಾಗಿ ಕೊರೊನಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ