Recent Posts

Sunday, January 19, 2025
ಹೆಚ್ಚಿನ ಸುದ್ದಿ

ದೇಶದಾದ್ಯಂತ ಇಂದು ಹೊಸ ವರ್ಷದ ಸಂಭ್ರಮ; ನಾಡಿನ ಸಮಸ್ತ ಜನತೆಗೆ ಹೊಸ ವರ್ಷಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ: ದೇಶದಾದ್ಯಂತ 2021 ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಕಾರಣದಿಂದ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆಯೇ ಎಲ್ಲರಿಗೂ 2021 ಹೊಸ ವರ್ಷದ ಶುಭಾಶಯಗಳು. ಈ ವರ್ಷ ಎಲ್ಲರಿಗೂ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ದೊರೆಯಲಿ. ಭರವಸೆ ಹಾಗೂ ಸ್ವಾಸ್ಥ್ಯದ ಮನೋಭಾವ ಮೇಲುಗೈ ಸಾಧಿಸಲಿ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಟ್ವೀಟ್ ಮಾಡಿದ್ದಾರೆ. ಇದರಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೂ ಕೂಡ ಕೊರೋನಾ ಸಾಂಕ್ರಾಮಿಕ ರೋಗದ ಸವಾಲಿನ ನಡುವಲ್ಲೇ ಮುನ್ನಡೆಯುವ ದೇಶದ ದೃಢ ನಿರ್ಧಾರಕ್ಕೆ ಹೊಸ ವರ್ಷ ಬಲ ನೀಡಲಿ. ಎಲ್ಲರಿಗೂ ಹೊಸ ವರ್ಷದ ಶುಭಾಶಗಳು ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ. ಹಾಗೆ ದೇಶದ ಎಲ್ಲಾ ನಾಗರೀಕರಿಗೂ 2021 ಹೊಸ ವರ್ಷದ ಶುಭಾಶಯಗಳು ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಟ್ವೀಟ್ ಮಾಡಿ, ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು