ಬಂಟ್ವಾಳ: ವಿಟ್ಲ ವಲಯ ಎಸ್.ಡಿ.ಪಿ.ಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಈ ಕೃತ್ಯ ನಡೆದಿದೆನ್ನಲಾಗಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿದೆ. ಪೈಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದರು.