Recent Posts

Friday, November 22, 2024
ಕಡಬ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡುವ ಮೂಲಕ ಹೆಚ್ಚು ಸ್ಥಾನವನ್ನು ಪಡೆದುಕೊಂಡಿದೆ;ಎ.ಐ.ಸಿ.ಸಿ ಕಾರ್ಯದರ್ಶಿ ಐವನ್ ಡಿಸೋಜಾ-ಕಹಳೆ ನ್ಯೂಸ್

ಕಡಬ: ಎ.ಐ.ಸಿ.ಸಿ ಕಾರ್ಯದರ್ಶಿ ಐವನ್ ಡಿಸೋಜಾ ಅವರು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡುವ ಮೂಲಕ ಹೆಚ್ಚು ಸ್ಥಾನವನ್ನು ಪಡೆದುಕೊಂಡಿದೆ ಎಂದು ಆರೋಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗರಯೇ ರಾಜ್ಯದಲ್ಲಿ ಒಟ್ಟು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸೀಟುಗಳು ಲಭ್ಯವಾಗಿದ್ದು, ಆಡಳಿತಾರೂಢ ಬಿಜೆಪಿಗೆ ಎಚ್ಚರಿಕ್ಕೆ ಗಂಟೆಯಾಗಿದೆ. ದಕ್ಷಿಣ ಕನ್ನಡ ಮತ್ತು ಕೆಲವು ಕಡೆ ಬಿಜೆಪಿಗೆ ಹೆಚ್ಚು ಸೀಟು ಲಭ್ಯವಾಗಿದೆ. ಇದು ವಿರೋಧ ಪಕ್ಷದ ಮೇಲೆ ದಬ್ಬಾಳಿಕೆ ಮಾಡಿ ಅಧಿಕಾರ ದುರುಪಯೋಗದ ಮೂಲಕ ಅಧಿಕಾರ ಪಡೆದುಕೊಂಡಿದ್ದಾರೆ ಎಂದು ನಿನ್ನೆ ಕಡಬ ಒಕ್ಕಲಿಗ ಸಮುದಾಯ ಭವನದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ವಿಜೇತ ಕಾಂಗ್ರೆಸ್ ಅಭ್ಯಗಳಿಗೆ ಸನ್ಮಾನ ಕಾರ್ತಕ್ರಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಶೇ. 85 ಗೆದ್ದಿದ್ದೇವೆ ಎನ್ನುವ ಬಿಜೆಪಿಯವರು ಸಾಮಥ್ರ್ಯವಿದ್ದರೆ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆಗೆ ಅವಕಾಶ ಮಾಡಿ ಕೊಡಲಿ, ನಾವು ತಯಾರಾಗಿದ್ದೇವೆ ಎಂದು ಸವಾಲು ಹಾಕಿದರು. ಬಿಜೆಪಿಗೆ ಇದು ಕೊನೆಯ ಆಡಳಿತ, ಒಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮತ್ತೆ ಅಧಿಕಾರಕ್ಕೆ ಬಂದ ನಿದರ್ಶನಗಳಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಹಾಗೆ ಮಾತನಾಡಿದ ಶಾಸಕ ಯು.ಟಿ ಖಾದರ್, ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದು ಎರಡು ವರ್ಷವಾದರೂ ಜನ ಸಾಮಾನ್ಯರಿಗೆ ಯಾವುದೇ ಸೌಲಭ್ಯ ನೀಡದೆ ಜನರನ್ನು ಬೀದಿಗೆ ತಂದು ನಿಲ್ಲಿಸಿರುವುದೇ ಬಿಜೆಪಿಯ ಕೊಡುಗೆಯಾಗಿದೆ ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ಸರಕಾರ ಜಾಗ ಇಲ್ಲದವರಿಗೆ 94 ಸಿಯಲ್ಲಿ ಜಾಗ ಮಂಜೂರು ಮಾಡಿದ್ದು, ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಬಿಪಿಎಲ್ ಕಾರ್ಡ್ ನೀಡಿದೆ. ಆದರೆ ಬಿಜೆಪಿ ಸರಕಾರ ಇದನ್ನು ಕಡಿತಗೊಳಿಸಿದೆ. ಇದು ರಾಜ್ಯದ ಜನತೆಗೆ ಮಾಡಿದ ಅನ್ಯಾಯ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು