Recent Posts

Sunday, January 19, 2025
ಬೆಂಗಳೂರು

2020ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಪಡೆಕೊಂಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿ- ಕಹಳೆ ನ್ಯೂಸ್

ಬೆಂಗಳೂರು:2020ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ರಕ್ಷಿತ್ ಶೆಟ್ಟಿಗೆ ದೊರೆತಿದೆ.


ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯನ್ನು ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗುರುತಿಸಿ ಪ್ರಕಟಿಸಲಾಗುವುದು. ಖ್ಯಾತ ನಟರಾದ ಶಿವರಾಜ್ ಕುಮಾರ್, ಅಜಿತ್ ಕುಮಾರ್, ಮೋಹನ್ ಲಾಲ್, ನಾಗಾರ್ಜುನ ಅಕ್ಕಿನೇನಿಯವರಿಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು ಪ್ರಶಸ್ತಿ ಲಭಿಸಿದ್ದು, ಕನ್ನಡದ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಕ್ಷಿತ್ ಶೆಟ್ಟಿ ಪಡೆದುಕೊಂಡರೆ, ಯಜಮಾನ ಸಿನಿಮಾದ ನಾಯಕಿ ನಟಿ ತಾಯ್ನಾ ಹೋಪ್ ಈ ಸಾಲಿನ ಕನ್ನಡದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಇನ್ನು ತೆಲುಗಿನ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ರಶ್ಮಿಕಾ ಮಂದಣ್ಣ ಬಾಚಿಕೊಂಡಿದ್ದು, ಡಾ. ಕೆ. ಶಿವರಾಮ ಕಾರಂತರ ಕಾದಂಬರಿ ಆಧಾರಿತ ‘ಮೂಕಜ್ಜಿಯ ಕನಸುಗಳು’ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆಕೊಂಡಿದ್ದಾರೆ. ಪ್ರೀಮಿಯರ್ ಪದ್ಮಿನಿ ಸಿನಿಮಾದ ನಿರ್ದೇಶಕ ರಮೇಶ್ ಇಂದಿರಾ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು