Tuesday, April 1, 2025
ಸುಳ್ಯ

ಪುತ್ತೂರಿನ ಮದುವೆ ಬಸ್ ಅಪಘಾತ :-ಸೂಕ್ತ ಪರಿಹಾರ ನೀಡಲು ಗಡಿನಾಡ ಹೋರಾಟ ಸಮಿತಿ ಆಗ್ರಹ-ಕಹಳೆ ನ್ಯೂಸ್

ಸುಳ್ಯ: ಸುಳ್ಯ- ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಪಾಣತ್ತೂರು ಬಳಿಯ ಪರಿಯಾರಂ ಎಂಬಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಜೀವ ಕಳೆದುಕೊಂಡವರ ಕುಟುಂಬಕ್ಕೆ ಮತ್ತು ಗಾಯಗೊಂಡು ಚಿಕಿತ್ಸೆಯಲ್ಲಿ ಇರುವವರಿಗೆ ಕರ್ನಾಟಕ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಗಡಿನಾಡ
ಹೋರಾಟ ಸಮಿತಿಯ ಸಂಚಾಲಕ ವಿಪಿನ್ ನಂಬಿಯಾರ್ ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪರಿಯಾರಂನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯವರಾದ ಏಳು ಮಂದಿಗೆ ಜೀವ ಹಾನಿ ಸಂಭವಿಸಿದ್ದು ಹಲವು ಮಂದಿ ಗಂಭೀರ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರುಗಳು ಮತ್ತು ಇತರ ಜನ ಪ್ರತಿನಿಧಿಗಳು ಗಮನ ಹರಿಸಿ ಸೂಕ್ತ ಪರಿಹಾರ ಘೋಷಿಸುವಂತೆ ಕ್ರಮ ಕೈಗೊಳ್ಳಬೇಕು. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಕೇರಳದ ಮುಖ್ಯಮಂತ್ರಿ ಮತ್ತು ಸಚಿವರು ಕೂಡಲೇ ಗಮನ ಹರಿಸಿ ರಕ್ಷಣಾ ಕಾರ್ಯಕ್ಕೆ ಮತ್ತು ಚಿಕಿತ್ಸೆ ನೀಡಲು ಸಹಕಾರ ನೀಡಿದ್ದಾರೆ. ಕರ್ನಾಟಕ ಸರಕಾರ ಕೂಡ ನೊಂದ ಕುಟುಂಬಕ್ಕೆ ಸೂಕ್ತ ಸ್ಪಂದನೆ ನೀಡಬೇಕು ಎಂದು ವಿಪಿನ್ ನಂಬಿಯಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ