Recent Posts

Monday, January 20, 2025
ಹೆಚ್ಚಿನ ಸುದ್ದಿ

ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿರುವ ಕೊಣಾಲು ದೇವತೆ ಕ್ಷೇತ್ರದಲ್ಲಿ ಜಾತಿ ಹೆಸರಿನಲ್ಲಿ ಸಾಮಾಜಿಕ ತಾರತಮ್ಯದ ಆರೋಪ- ಕಹಳೆ ನ್ಯೂಸ್

ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿರುವ ಕೊಣಾಲು
ದೇವತೆ ಕ್ಷೇತ್ರದಲ್ಲಿ ಜಾತಿ ಹೆಸರಿನಲ್ಲಿ ಸಾಮಾಜಿಕ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಕೇಂದ್ರ ಸಮಿತಿಯ ನಿಯೋಗ ಜನವರಿ 6ರಂದು ದೈವಸ್ಥಾನಕ್ಕೆ ಭೇಟಿ ನೀಡಿತು.


ದೈವಸ್ಥಾನದಲ್ಲಿ 6ರಂದು ಉತ್ಸವಾದಿಗಳು ನಡೆದಿದ್ದು, ಕ್ಷೇತ್ರದ
ತಂತ್ರಿವರ್ಯರಾದ ಕೆಮ್ಮಿಂಜೆ ನಾಗೇಶ್ ತಂತ್ರಿಯವರಿಗೆ ಮಾಹಿತಿ ನೀಡಿದ್ದ ಬಿಲ್ಲವ ಸಂಘದ ನಿಯೋಗ ಬುಧವಾರ ಕ್ಷೇತ್ರಕ್ಕೆ ತೆರಳಿ ತಂತ್ರಿಗಳ ಸಮ್ಮುಖದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾದ ಸತೀಶ್ ರೈ ಅವರಲ್ಲಿ ಸಾಮಾಜಿಕ ತಾರತಮ್ಯದ ಬಗ್ಗೆ ವಿವರಣೆ ಕೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು