Recent Posts

Sunday, January 19, 2025
ಬಂಟ್ವಾಳ

ಸಮರ್ಪಕ ವೈದ್ಯಕೀಯ ಸೌಲಭ್ಯಗಳು ಇದ್ದರೆ ಪಶುಪಾಲನೆ ಅಭಿವೃದ್ಧಿ ಸಾಧ್ಯ ಎಂದ ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ಅವರು ಸಮರ್ಪಕ ವೈದ್ಯಕೀಯ ಸೌಲಭ್ಯಗಳು ಇದ್ದರೆ ಪಶುಪಾಲನೆ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಇವರು ದಕ್ಷಿಣ ಕನ್ನಡ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಆರ್‍ಐಡಿಎಫ್-25 ಯೋಜನೆಯಡಿ ಮಂಜೂರಾದ ಮಂಚಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಶುಕ್ರವಾರ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆಯೇ ಕೃಷಿ ಮತ್ತು ಪಶು ಸಂಗೋಪನೆ ಒಂದಕ್ಕೊಂದು ನೇರವಾದ ಸಂಪರ್ಕವನ್ನು ಹೊಂದಿದ್ದು, ಗ್ರಾಮೀಣ ಭಾಗಗಳಲ್ಲಿ ವೈದ್ಯಕೀಯ ಸೌಲಭ್ಯಗಳು ಅಗತ್ಯವಾಗಿದೆ ಎಂದರು. ಮತ್ತು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು, ಕೃಷಿಕರೇ ಹೆಚ್ಚಿರುವ ಮಂಚಿಯಲ್ಲಿ ಬಹಳ ವರ್ಷಗಳ ಹಿಂದಿನಿಂದಲೂ ಪಶು ಚಿಕಿತ್ಸಾಲಯವಿದ್ದರೂ, ಸೂಕ್ತ ರೀತಿಯ ಕಟ್ಟಡವಿರಲಿಲ್ಲ ಎಂದು ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ ಮತ್ತು ಎಂ.ಎಸ್.ಮಹಮ್ಮದ್ ಶುಭ ಹಾರೈಸಿದರು. ಹಾಗೂ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ದಕ್ಷಿಣ ಕನ್ನಡ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಪ್ರಸನ್ನಕುಮಾರ್ ಟಿ.ಜಿ., ಬೆಂಗಳೂರು ಎನ್‍ಪಿಸಿಸಿಎಲ್ ಪ್ರಾಜೆಕ್ಟ್ ಎಂಜಿನಿಯರ್ ಬಸನಗೌಡ ಪಾಟೀಲ್, ಸ್ಥಳೀಯರಾದ ಡಾ.ಗೋಪಾಲಕೃಷ್ಣ ಆಚಾರ್, ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದು ಶುಭ ಸ್ಥಳದಾನಿ ಸೂರ್ಯಕಿರಣ್ ಆಚಾರ್ ಮಂಚಿ ಅವರನ್ನು ಸನ್ಮಾನಿಸಲಾಯಿತು. ಬಂಟ್ವಾಳ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಅವಿನಾಶ್ ಭಟ್ ಕೆ. ಸ್ವಾಗತಿಸಿದರು. ಮತ್ತು ಜಾನುವಾರು ಅಭಿವೃದ್ಧಿ ಅಧಿಕಾರಿಗಳಾದ ಕೃಷ್ಣಮೂರ್ತಿ ವಂದಿಸಿದರು. ಹಾಗೂ ಶ್ರೀಧರ ಶೆಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು