Thursday, January 23, 2025
ಹೆಚ್ಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ರಂಗೇನಹಳ್ಳಿಯಲ್ಲಿ ಭೀಕರ ಅಪಘಾತ;ಕುಂದಾಪುರ ಮೂಲದ ಮೂವರ ದುರ್ಮರಣ-ಕಹಳೆ ನ್ಯೂಸ್

ತರಿಕೆರೆ: ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ರಂಗೇನಹಳ್ಳಿಯ ಬಳಿಯಲ್ಲಿ ಹುಂಡೈಕಾರು ಮತ್ತು ಇಕೋ ಸ್ಟೋರ್ಟ್ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯಲ್ಲಿ ಕುಂದಾಪುರ ಮೂಲದ ಮೂವರು ಸಾವನ್ನಪ್ಪಿದ್ದಾರೆ. ಅವರು 26 ವರ್ಷದ ನಾಗೇಂದ್ರ ಮತ್ತು 30 ವರ್ಷದ ಸುಜಿತಾ ಹಾಗೂ 35 ವರ್ಷದ ಅನಿಲ್ ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಹುಂಡೈಕಾರು ಮತ್ತು ಬೆಂಗಳೂರಿನಿಂದ ತೀರ್ಥಹಳ್ಳಿಯ ಕಡೆಗೆ ಬರುತ್ತಿದ್ದ ಇಕೋಸ್ಪೋರ್ಟ್ ಕಾರುಗಳ ನಡುವೆ ರಂಗೇನಹಳ್ಳಿಯ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಗೇಂದ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅನಿಲ್ ಮತ್ತು ಸುಜಿತಾ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ವತ್ರೆಗೆ ಕರೆದೋಯ್ಯಿವ ವೇಳೆಯಲ್ಲಿ ಇಬ್ಬರೂ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಲಕ್ಕವಳ್ಳಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು