Thursday, January 23, 2025
ಸುದ್ದಿ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಕಣದಿಂದ ಹಿಂದೆ ಸರಿದ ದಕ್ಷಿಣ ಕನ್ನಡದ ಯುವ ಕಾಂಗ್ರೇಸ್ ಜಿಲ್ಲಾ ಅಧ್ಯಕ್ಷ ಮಿಥುನ್ ರೈ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡದ ಯುವ ಕಾಂಗ್ರೇಸ್ ಜಿಲ್ಲಾ ಅಧ್ಯಕ್ಷ ಮಿಥುನ್ ರೈ ಅವರು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಯುವ ಕಾಂಗ್ರೇಸ್ ಅಧ್ಯಕ್ಷ ಚುನಾವಣೆಗೆ ರಾಜ್ಯದ ಹಲವು ಯುವ ಮುಖಂಡರು ಸ್ವರ್ಧಿಸುತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ, ದಕ್ಷಿಣ ಕನ್ನಡ ಯುವ ಕಾಂಗ್ರೇಸ್ ಜಿಲ್ಲಾ ಅಧ್ಯಕ್ಷ ಮಿಥುನ್ ರೈ ಅವರು ಕೂಡ ಸ್ವರ್ಧಿಸುತಿದ್ದರು. ಇದೀಗ ಮಿಥುನ್ ರೈ ಅವರು ಡಿಕೆಶಿ ನಿರ್ದೇಶನದ ಮೆರೆಗೆ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಯುವ ಕಾಂಗ್ರೇಸ್ ಕಾರ್ಯಕರ್ತರೇ ಮತದಾನದ ಮೂಲಕ ರಾಜ್ಯ ಯುವ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷತೆಗೆ ಜಿಲ್ಲೆಗಳ ಅನುಸಾರವಾಗಿ ಜನವರಿ 10, 11, 12ರಂದು ಚುನಾವಣೆ ನಡೆಯಲಿದೆ. ಮತದಾನ ಮಾಡಲು ಯುವ ಕಾಂಗ್ರೆಸ್ ಸದಸ್ಯರು ಪ್ಲೇ ಸ್ಟೋರ್‍ನಲ್ಲಿರುವ ಐವೈಸಿ ಆಪ್ ಡೌನ್‍ಲೋಡ್ ಮಾಡಿಕೊಳ್ಳಬೇಕಾಗಿ ಪಕ್ಷದ ಪ್ರಕಟನೆ ತಿಳಿಸಿದೆ.