Saturday, November 23, 2024
ಬೆಂಗಳೂರು

ಭಾವಚಿತ್ರ ಇರುವ ಗುರುತಿನ ಚೀಟಿಗಳಿಗಷ್ಟೇ ಕೊರೋನಾ ಲಸಿಕೆ ಭಾಗ್ಯ: ಆರೋಗ್ಯ ಇಲಾಖೆ- ಕಹಳೆ ನ್ಯೂಸ್

ಬೆಂಗಳೂರು: ದೇಶಾದ್ಯಂತ ಕೊರೋನಾ ಲಸಿಕೆಯು ನಾಳೆಯಿಂದ ವಿತರಣೆ ಮಾಡಲಾಗುತ್ತಿದ್ದು, ಕೋವಿಡ್ ಲಸಿಕೆ ವಿತರಣೆ ಕೇಂದ್ರದಲ್ಲಿ ಆರೋಗ್ಯ ಕಾರ್ಯಾಕರ್ತರು ಹೆಸರು ನೋಂದಣಿ ಸಮಯದಲ್ಲಿ ನೀಡಿದ ಗುರಿತಿನ ಚೀಟಿ ತೋರಿಸಿದರೆ ಮಾತ್ರ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


ಕೋವಿಡ್ ಲಸಿಕೆ ನಾಳೆಯಿಂದ ಜನರಿಗೆ ವಿತರಣೆ ಆರಂಭವಾಗಲಿದೆ. ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಂಡವರ ಮೊಬೈಲ್ ಸಂಖ್ಯೆಗೆ ನಿಗದಿತ ಸ್ಥಳ, ದಿನಾಂಕ ಮತ್ತು ಸಮಯದ ಮಾಹಿತಿಯ ಸಂದೇಶವನ್ನು ಕಳುಹಿಸಲಾಗುತ್ತದೆ. ಈ ಮೂಲಕವಾಗಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ. ಲಸಿಕೆ ಅಭಿಯಾನ ನಡೆಯುವ ಸ್ಥಳದಲ್ಲಿ ವ್ಯಕ್ತಿಯ ಭಾವಚಿತ್ರ ಇರುವ ಗುರುತಿನ ಚೀಟಿಯನ್ನು ತೋರಿಸಿದ ನಂತರ ಕೇಂದ್ರದ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಾರೆ ಎಂದು ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು