Recent Posts

Sunday, January 19, 2025
ಬೆಂಗಳೂರು

ರಾಜ್ಯಕ್ಕೆ ಅಮಿತ್ ಶಾ ಭೇಟಿಯ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ; ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು : ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ರಾಜ್ಯ ಬಿಜೆಪಿ ನಾಯಕರ ಸಭೆ ಸಂಜೆ ೭.೩೦ಕ್ಕೆ  ನಡೆಯಲಿದೆ.

ಈ ಸಭೆಯ ಬಳಿಕ ರಾಜ್ಯಕ್ಕೆ ಆಗಮಿಸಲಿರುವಂತ ಕೇಂದ್ರ ಸಚಿವ ಅಮಿತ್ ಶಾ ಅವರು ಬಂದು ಹೋದ ಬಳಿಕ ಚರ್ಚಿಸಿ, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ನಗರದ ಸುದ್ದಿಗಾರರೊಂದಿಗೆ ಮಾತನಾಡಿದರು. ಅವರು ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ರಾಜ್ಯ ಬಿಜೆಪಿ ನಾಯಕರ ಸಭೆ ನಡೆಯಲಿದೆ. ಇದರಲ್ಲಿ ರಾಜ್ಯ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ವಿವಿಧ ವಿಚಾರಗಳ ಕುರಿತಂತೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು. ನೂತನ ಸಚಿವರಿಗೆ ಖಾತೆ ಹಂಚಿಕೆ ಯಾವಾಗ ನಡೆಯಲಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದಂತ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರು ಭೇಟಿ ನೀಡಿದಂತ ಸಂದರ್ಭದಲ್ಲಿ ಅವರೊಂದಿಗೆ ಖಾತೆ ಹಂಚಿಕೆ ಬಗ್ಗೆ ಚರ್ಚಿಸಿ, ಆನಂತರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು