Recent Posts

Sunday, January 19, 2025
ಬೆಂಗಳೂರು

ಯಡಿಯೂರಪ್ಪರವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ: ಮಾಜಿ ಸಿಎಂ. ಸಿದ್ದರಾಮಯ್ಯ ವಾಗ್ದಾಳಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಹೆಸರಿಗಷ್ಟೇ ಮುಖ್ಯಮಂತ್ರಿಯಾಗಿದ್ದು ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪರವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಸಿದ್ದರಾಮಯ್ಯ ವಾಗ್ದಾ ಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು