ಕಲ್ಲಡ್ಕ: ಕರ್ನಾಟಕ ಸರಕಾರದ ನೂತನ ಸಚಿವರಾದ ಶ್ರೀ ಅಂಗಾರರವರು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಇಲ್ಲಿಗೆ ಭೇಟಿ ನೀಡಿದರು.
ವಿದ್ಯಾಕೇಂದ್ರದ ಹಿರಿಯರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕಇವರು ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ. ನಾರಾಯಣ ಸೋಮಯಾಜಿ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಸಂಚಾಲಕರು ವಸಂತ ಮಾಧವ, ಮಾಜಿ ಶಾಸಕರಾದ ಪದ್ಮನಾಭಕೊಟ್ಟಾರಿ, ರುಕ್ಮಯ ಪೂಜಾರಿ, ವಿದ್ಯಾಕೇಂದ್ರದಎಲ್ಲಾ ಮುಖ್ಯಸ್ಥರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.