Recent Posts

Sunday, January 19, 2025
ಹೆಚ್ಚಿನ ಸುದ್ದಿ

ಪ್ರೇಯಸಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಾಳೆಂಬ ಕಾರಣಕ್ಕೆ ಕೊಲೆ ಮಾಡಿ ಗೋಡೆಯೊಳಗೆ ಹಾಕಿ ಮುಚ್ಚಿಟ್ಟಿದ್ದ ಕಿರಾತಕ-ಕಹಳೆ ನ್ಯೂಸ್

ಪಾಲ್ಘರ್ ಜಿಲ್ಲೆಯಲ್ಲಿ ಪ್ರೇಯಸಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಾಳೆಂಬ ಕಾರಣಕ್ಕೆ ಸಿಟ್ಟಿಗೆದ್ದ ಪ್ರೇಮಿ ಆಕೆಯನ್ನು ಕೊಲೆ ಮಾಡಿ ಗೋಡೆಯೊಳಗೆ ಮರೆಮಾಚಿ ಇಟ್ಟಿದ್ದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಯುವಕನೋರ್ವ 32 ವರ್ಷದ ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ, ಯುವಕನ ಮನೆಯಲ್ಲಿ ಇವರಿಬ್ಬರ ಪ್ರೀತಿಗೆ ಒಪ್ಪಿಗೆ ಇರಲಿಲ್ಲ. ಆದರೆ, ಯುವತಿ ತನ್ನನ್ನು ಮದುವೆಯಾಗುವಂತೆ ಯುವಕನನ್ನು ಒತ್ತಾಯಿಸುತ್ತಿದ್ದಳು. ಇದರಿಂದ ಕೋಪಗೊಂಡ ಆ ಯುವಕ ಕಳೆದ ವರ್ಷ ಅಕ್ಟೋಬರ್ ನಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಯುವತಿಯ ಅಸ್ಥಿ ಪಂಜರ ಈಗ ಯುವಕನ ಪ್ಲ್ಯಾಟ್ ನ ಗೋಡೆಯಲ್ಲಿ ಪತ್ತೆಯಾಗಿದ್ದು, ಯುವತಿಯ ಮನೆಯವರು ಯುವತಿ ಎಲ್ಲಿದ್ದಾಳೆ ಎಂದು ಕೇಳಿದಾಗ, ಆಕೆ ಗುಜರಾತ್ ನ ವಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾಳೆ ಎಂದು ಯುವಕ ಸುಳ್ಳು ಹೇಳಿದ್ದ. 2020ರ ಅಕ್ಟೋಬರ್ ನಿಂದ ಯುವತಿ ಆಕೆಯ ಮನೆಯವರ ಸಂಪರ್ಕಕ್ಕೆ ಸಿಗದಿರುವುದರಿಂದ ಅನುಮಾನ ಗೊಂಡು ಯುವತಿಯ ಮನೆಯವರು ಪೆÇಲೀಸರಿಗೆ ದೂರು ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು