Recent Posts

Sunday, January 19, 2025
ಹೆಚ್ಚಿನ ಸುದ್ದಿ

ಇಂದಿನಿಂದ ಕೊರೋನಾ ಲಸಿಕೆ ಅಭಿಯಾನ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ನಡೆಯಲಿದೆ; ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್-ಕಹಳೆ ನ್ಯೂಸ್

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಇಂದಿನಿಂದ ಕೊರೋನಾ ಲಸಿಕೆ ಅಭಿಯಾನ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ ಕೊರೋನಾ ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ. ಕೊರೋನಾ ಲಸಿಕೆಯನ್ನು ಡಾ. ಸುದರ್ಶನ್ ಬಲ್ಲಾಳ್ ಅವರು ಕೂಡ ಪಡೆದಿದ್ದು, ಅವರಿಗೂ ಯಾವುದೇ ಸಮಸ್ಯೆಯಾಗಿಲ್ಲ. ಲಸಿಕೆಯ ಮೇಲೆ ವಿಶ್ವಾಸವಿಡಿ. ಲಸಿಕೆ ಪಡೆದವರು ಮೈ ಮರೆಯದೇ, ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲೇ ಬೇಕು ಎಂದು ತಿಳಿಸಿದರು. ಮೊದಲ ದಿನವೇ ರಾಜ್ಯದಲ್ಲಿ 62% ಮಂದಿಗೆ ಲಸಿಕೆ ನೀಡಿರುವುದು ಆಶಾದಾಯಕವಾಗಿದೆ. 4200 ಸಿಬ್ಬಂದಿಗೆ ಮಣಿಪಾಲ್ ಆಸ್ವತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ಹಾಗೆ ಕಾರಣಾಂತರಗಳಿಂದ ಲಸಿಕೆ ಪಡೆಯದವರು ಮತ್ತೆ ಲಸಿಕೆ ಪಡೆಯಲು ಅವಕಾಶವಿದೆ. ಚುನಾವಣೆಯಲ್ಲಿ ಮಾಡುವಂತೆ ಬೂತ್‍ಗಳನ್ನು ರೂಪಿಸಿ ವ್ಯವಸ್ಥಿತವಾಗಿ ಲಸಿಕೆ ನೀಡಲಾಗುತ್ತಿದ್ದು, ಶೇ.70 ರಷ್ಟು ಮಂದಿಗೆ ಲಸಿಕೆ ನೀಡಲು ಸಾಧ್ಯವಿದೆ ಎಂದು ಹೇಳಿದರು

ಜಾಹೀರಾತು
ಜಾಹೀರಾತು
ಜಾಹೀರಾತು