ಬಂಟ್ವಾಳ : ಬಿಸಿರೋಡಿನ ಹೃದಯ ಭಾಗದಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ ಬಳಿಕ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ನೇತ್ರತ್ವದ ತಂಡ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ನಾಲ್ವರು ಯುವಕರನ್ನು ವಶಕ್ಕೆ ಪಡೆದುಕೊಂಡು, ಐದು ಮಂದಿ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಹಾಗೆ ಇನ್ನು ಒಟ್ಟು ಒಂಬತ್ತು ಮಂದಿಯನ್ನು ಠಾಣೆಗೆ ಕರದೊಯ್ಯಲಾಗಿದ್ದು ತನಿಖೆ ಮುಂದುವರಿದಿದೆ.