Recent Posts

Sunday, January 19, 2025
ಹೆಚ್ಚಿನ ಸುದ್ದಿ

ಮಹಾಲಕ್ಷ್ಮೀ ದೇವಾಸ್ಧಾನಕ್ಕೆ ಭೇಟಿ ನೀಡಿದ ಬಿ.ಎಸ್. ವೈ — ಕಹಳೆ ನ್ಯೂಸ್

ಕಾಪು: ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ದೇವಸ್ಥಾನ ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರವಾಗಲಿದ್ದು ˌ ಈಗಾಗಲೇ ರೂ. 5 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದುˌ ಹೆಚ್ಚುವರಿ ರೂ.10 ಕೋಟಿ ಅನುದಾನ ಬಿಡುಗಡೆಗೆ ಮನವಿ ಮಾಡಲಾಯಿತು.


ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ ಡಾ.ಜಿ. ಶಂಕರ್ˌ ದ.ಕ. ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ˌ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸು ಸಾಲ್ಯಾನ್ˌ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಗುಂಡು ಸಿ. ಅಮೀನ್ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ರಾಘವೇಂದ್ರ ಉಪಾಧ್ಯಾಯ ಅವರ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ರವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆˌ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿˌ ಶಾಸಕ ಲಾಲಾಜಿ ಆರ್. ಮೆಂಡನ್ˌ ರಘುಪತಿ ಭಟ್ˌ ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿˌ ಸದಸ್ಯೆ ಶಿಲ್ಪಾ ಜಿ. ಸುವರ್ಣˌ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣˌ ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಸುರೇಶ್ ನಾಯಕ್ˌ ಬಿಜೆಪಿ ಮುಖಂಡ ಉದಯ್ ಕುಮಾರ್ ಶೆಟ್ಟಿˌ ಕುತ್ಯಾರು ನವೀನ್ ಶೆಟ್ಟಿˌ ಹಾಗೂ ಮೊಗವೀರ ಸಮಾಜದ ವಿವಿಧ ಮುಖಂಡರು ˌ ಕ್ಷೇತ್ರಾಡಳಿತ ಸಮಿತಿ ˌ ಜೀರ್ಣೋದ್ದಾರ ಸಮಿತಿ ಸಹಿತ ವಿವಿಧ ಉಪ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು