ಗುಜಾರಾತ್‍ನ ಸೂರತ್ ನಗರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ; ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ 14 ಮಂದಿ ಕಾರ್ಮಿಕರ ದುರ್ಮರಣ, ಇದಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್
ಸೂರತ್: ಧಾರವಾಡದಲ್ಲಿ ನಡೆದ ಭೀಕರ ಅಪಘಾತದ ಬೆನ್ನಲ್ಲೇ ಗುಜಾರಾತ್‍ನ ಸೂರತ್ ನಗರದ ಕೊಸಂಬಾದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ. ಕಾರ್ಮಿಕರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರೆಂದು ಹೇಳಲಾಗುತ್ತಿದೆ. ಈ ಪರಿಣಾಮ ಘಟನೆಯಲ್ಲಿ 14 ಮಂದಿ ಕಾರ್ಮಿಕರು ದುರ್ಮರಣವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
ಸಾವನ್ನಪ್ಪಿದ್ದ ಎಲ್ಲ ಕಾರ್ಮಿಕರು ರಾಜಸ್ಥಾನ ಮೂಲದವರಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ. ಈ ದುರ್ಘಟನೆಯ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸೂರತ್ ಟ್ರಕ್ ಅಪಘಾತದಲ್ಲಿ ಹಲವು ಜನರು ಸಾವನ್ನಪ್ಪಿರುವುದು ದುರಂತ.
ಮೃತರ ಎಲ್ಲಾ ಕುಟುಂಬಸ್ಥರ ಕುರಿತು ತೀವ್ರ ಸಂತಾಪವನ್ನು ಸೂಚಿಸುತ್ತೇನೆ. ಹಾಗೂ ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದು ಮೃತ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ನೀಡಲು ಸೂಚನೆ ನೀಡಿದ್ದಾರೆ.