Thursday, January 23, 2025
ಹೆಚ್ಚಿನ ಸುದ್ದಿ

ಅಪ್ರಚೋದಿತ ದಾಳಿ ನಡೆಸಿದ ಪಾಕ್; ಮೂರು ಉಗ್ರರ ಬಲಿ-ಕಹಳೆ ನ್ಯೂಸ್

ಶ್ರೀನಗರ: ಪಾಕಿಸ್ತಾನದ ಮೂರು ಉಗ್ರರು ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿಯಿಂದ ಗಡಿ ನುಸುಳಲು ಪ್ರಯತ್ನಿಸುತ್ತಿದ್ದ ವೇಳೆ ಭಾರತೀಯ ಯೋಧರು ಅವರನ್ನು ಹತ್ಯೆ ಮಾಡಿರುವ ವಿಚಾರ ಬುಧವಾರ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಖ್ನೂರ್ ಸೆಕ್ಟರ್ ಬಳಿ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ರಕ್ಷಣಾ ಮೂಲಗಳು ಹೇಳಿವೆ. ದಾಳಿಯಿಂದ ೪ ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಈ ವೇಳೆ ಭಾರತೀಯ ಸೇನೆ ೩ ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಹತ್ಯೆ ಮಾಡಲಾದ ೩ ಮೃತದೇಹಗಳನ್ನು ಇನ್ನು ಪಾಕಿಸ್ತಾನ ತನ್ನ ವಶಕ್ಕೆ ಪಡೆದುಕೊಂಡಿಲ್ಲ ಎಂದು ಹೇಳಲಾಗಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು