Sunday, January 19, 2025
ಪುತ್ತೂರು

ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳಿಂದ ದತ್ತಿನಿಧಿ ವಿತರಣೆ-ಕಹಳೆ ನ್ಯೂಸ್

ಪುತ್ತೂರು : ಸ್ವಯಂ ಕೌಶಲ್ಯದಿಂದ ಜೀವನದಲ್ಲಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು. ಧನ ಸಹಾಯ ಮಾಡಲು ಸಾಮಥ್ರ್ಯವಿರುವ ವ್ಯಕ್ತಿಗಳ ಜೊತೆಗೆ ಮತ್ತಷ್ಟು ಅಂತಹ ಮನಸ್ಸುಗಳು ಸೇರಬೇಕು. ಆ ಮೂಲಕ ಮುಂದಿನ ಪೀಳಿಗೆಯ ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಶಿಕ್ಷಣದ ಜೊತೆಗೆ, ಉಚಿತ ಆಹಾರ, ವಸತಿಯನ್ನು ಉಚಿತವಾಗಿ ಪಡೆಯುವ ಹಂತಕ್ಕೆ ಬರಬಹುದು ಎಂದು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಕಾರ್ತಿಕೇಯ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬುಧವಾರ ಮಾತಾಡಿದರು.ವೇದ ಮತ್ತು ಉಪನಿಷತ್ತ್‍ಗಳಲ್ಲಿ ಹೇಳಿರುವಂತೆ ವಿದ್ಯಾದಾನ ಅತ್ಯಂತ ಶ್ರೇಷ್ಠವಾಗಿದ್ದು. ಸಂಪಾದಿಸಿದ ಸ್ವಲ್ಪ ಹಣವನ್ನು ದಾನ ಮಾಡಿದರೆ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಸಂಚಾಲಕ ಮುರುಳಿಕೃಷ್ಣ ಕೆ. ಎನ್. ಮಾತನಾಡಿ, ವಿದ್ಯೆಯಿಂದ ವಿನಯ ಲಭಿಸುತ್ತದೆ. ಶಿಕ್ಷಣ ಎನ್ನುವುದು ಜೀವನದ ಒಂದು ಭಾಗವಲ್ಲದೆ, ಜೊತೆಗೆ ಕೈಲಾದಷ್ಟು ದಾನಧರ್ಮವನ್ನು ನೀಡಬೇಕು ಎಂದು ಈ ಸಂದರ್ಭದಲ್ಲಿ ನುಡಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ವಿ.ಜಿ ಭಟ್, ಹಿರಿಯ ವಿದ್ಯಾರ್ಥಿ ಶ್ರೀವತ್ಸ ಉಪಸ್ಥಿತರಿದ್ದರು. ಈ ಸಂದರ್ಭ ಆಯ್ದ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಉಪನ್ಯಾಸಕ ಶಿವಪ್ರಸಾದ್ ಕೆ.ಎಸ್. ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು