Sunday, January 19, 2025
ಬೆಳ್ತಂಗಡಿ

ಝೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಬೆಳ್ತಂಗಡಿಯ ಪ್ರತಿಭೆ ಪ್ರತೀಕ್ಷಾ-ಕಹಳೆ ನ್ಯೂಸ್

ಬೆಳ್ತಂಗಡಿ : ಝೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋನಲ್ಲಿ ಅತ್ಯುತ್ತಮ ನೃತ್ಯ ಪ್ರದರ್ಶನ ನೀಡುವ ಮೂಲಕ ಬೆಳ್ತಂಗಡಿ ತಾಲೂಕಿನ ಲಾಯಿಲಾ ಗ್ರಾಮದ ಪ್ರತೀಕ್ಷಾ ಮುಂದಿನ ಸುತ್ತಿಗೆ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು Abbakka Little Champs ನಲ್ಲಿ ಪ್ರತೀಕ್ಷಾ ಅತ್ಯುತ್ತಮ ನೃತ್ಯ ಪ್ರದರ್ಶನ ನೀಡುವ ಮೂಲಕ ವಿಜೇತೆಯಾಗಿದ್ದು, ಈ ಬಾರಿ ಡಿ.ಕೆ.ಡಿ.ಯಲ್ಲಿ ತಮ್ಮ ಪ್ರದರ್ಶನದ ಮೂಲಕ ತೀರ್ಪುಗಾರರ ಮನಗೆದ್ದಿದ್ದಾರೆ. ತೀರ್ಪುಗಾರರಾದ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್, ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟ ವಿಜಯ ರಾಘವೇಂದ್ರ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಇವರುಗಳು ಪ್ರತೀಕ್ಷಾ ನೃತ್ಯ ಪ್ರದರ್ಶನ ಮೆಚ್ಚಿ ಮುಂದಿನ ಸುತ್ತಿಗೆ ಆಯ್ಕೆ ಮಾಡಿದ್ದು, ಜೊತೆಗೆ ಉತ್ತಮ ಪ್ರತಿಕ್ರಿಯೆ ನೀಡಿ, ಶುಭಹಾರೈಸಿದ್ದಾರೆ. ಪ್ರತೀಕ್ಷಾ ಅವರು ಲಾಯಿಲಾ ಬೇಬಿ ಮತ್ತು ಜಿ. ವಿನಯ್ ದಂಪತಿಗಳ ಪುತ್ರಿಯಾಗಿದ್ದು, ಬೀಟ್ ರಾಕರ್ ಡ್ಯಾನ್ಸ್ ಅಕಾಡೆಮಿ ಬೆಳ್ತಂಗಡಿಯ ನೃತ್ಯ ನಿರ್ದೇಶಕ ಜಿತೇಶ್ ಕುಮಾರ್ ಅವರ ಶಿಷ್ಯಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು