Friday, January 24, 2025
ಪುತ್ತೂರು

ರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಚರಿತ್ ಪ್ರಕಾಶ್‍ಗೆ ಬಹುಮಾನ-ಕಹಳೆ ನ್ಯೂಸ್

ಪುತ್ತೂರು : ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಸ್ವರಾಜ್ ಮೈದಾನದಲ್ಲಿ ನಡೆದ 36 ನೇರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದ ಹೈ ಜಂಪ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಚರಿತ್ ಪ್ರಕಾಶ್ ಇವರು 1.65 ಮೀಟರ್ ಎತ್ತರ ಜಿಗಿಯುವುದರೊಂದಿಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈತನು ಸುಳ್ಯ ತಾಲೂಕಿನ ಪಂಜದ ಚಂದ್ರ ಪ್ರಕಾಶ ಕೆ ಮತ್ತು ಹಂಸವತಿ ದಂಪತಿಗಳ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.