Thursday, January 23, 2025
ಹೆಚ್ಚಿನ ಸುದ್ದಿ

ಶಿವಮೊಗ್ಗದ ರೈಲ್ವೇ ಕ್ರಷರ್ ನಲ್ಲಿ ಭೀಕರ ಸ್ಫೋಟ ; 15ಕ್ಕೂ ಹೆಚ್ಚು ಕಾರ್ಮಿಕರ ಸಾವು-ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗದಲ್ಲಿ ರೈಲ್ವೇ ಕ್ರಷರ್ ಒಂದರಲ್ಲಿ ಭಾರೀ ಸ್ಪೋಟ ಉಂಟಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಾರಿಯ ತುಂಬಾ ಅಕ್ರಮ ಕಲ್ಲು ಗಣಿಗಾರಿಕೆಗೆಂದು ಸುಮಾರು 50 ಡೈನಮೈಟ್‍ಗಳನ್ನು ಸಾಗಿಸಲಾಗುತ್ತಿದ್ದ ವೇಳೆಯಲ್ಲಿ ಡೈನಮೈಟ್ ಸಿಡಿದ ಪರಿಣಾಮ ಈ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿದ್ದು, ಸ್ಥಳದಲ್ಲಿದ್ದ ಎಲ್ಲ ಕಾರ್ಮಿಕರೂ ಮೃತಪಟ್ಟಿದ್ದಾರೆ. ಅವರೆಲ್ಲರೂ ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಫೋಟದ ತೀವ್ರತೆಗೆ ವಿದ್ಯುತ್ ಸಂಪೂರ್ಣ ಸ್ಥಗಿತಗೊಂಡಿದೆ. ಇದರಲ್ಲಿ ಐದಾರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿದ್ದು, ಘಟನೆಯಲ್ಲಿ ಇನ್ನಷ್ಟು ಜನರು ಮೃತಪಟ್ಟಿರುವ ಅನುಮಾನ ವ್ಯಕ್ತವಾಗಿದೆ. ಕತ್ತಲೆಯಲ್ಲಿ ಮೃತದೇಹಗಳನ್ನು ಪತ್ತೆ ಹಚ್ಚುವುದು ಕಷ್ಟವಾಗಿದೆ. ಅಲ್ಲದೇ ಸ್ಥಳದಲ್ಲಿ ಸ್ಫೋಟಗೊಳ್ಳದ ಜೀವಂತ ಡೈನಾಮೈಟ್‍ಗಳು ಇರುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಕೇಳಿ ಬರುತ್ತಿದೆ. ಶಿವಮೊಗ್ಗದಲ್ಲಿ ರಾತ್ರಿ 10.20 ರಿಂದ 10.25 ರ ವೇಳೆಗೆ ಭಾರೀ ಸ್ಫೋಟ ಸಂಭವಿಸಿತ್ತು. ಇದು ಭೂಕಂಪ ಎಂದೇ ಹೇಳಲಾಗಿತ್ತು. ಆದರೆ ಇದು ವಾಸ್ತವವಾಗಿ ಅಕ್ರಮ ಕಲ್ಲು ಕ್ವಾರಿಯಲ್ಲಿ ಉಂಟಾದ ಸ್ಫೋಟ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು