Friday, January 24, 2025
ಸುದ್ದಿ

ಮಂಗಳೂರಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ 38 ಕೆ.ಜಿ. ಗಾಂಜಾ ವಶಕ್ಕೆ ಪಡೆದ ಸಿಸಿಬಿ ಪೊಲೀಸರು; ನಾಲ್ವರ ಬಂಧನ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಸಿಸಿಬಿ ಪೊಲೀಸರ ತಂಡ ಭಾರೀ ಪ್ರಮಾಣದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಹೊರವಲಯದ ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರ ತಂಡ ತೆಲಂಗಾಣ ಮೂ¯ದ ವಿಠಲ್ ಚೌಹಾನ್ ಮತ್ತು ಬೀದರ್ ನಿವಾಸಿಗಳಾದ ಸಂಜೀವ ಕುಮಾರ್, ಕಲ್ಲಪ್ಪ ಎಂಬವರನ್ನು ಬಂಧಿಸಿದ್ದಾರೆ. ಹಾಗೆಯೇ ಗಾಂಜಾ ಸಾಗಾಟಕ್ಕೆ ಬಳಕೆ ಮಾಡುತ್ತಿದ್ದ ಮಹಾರಾಷ್ಟ್ರ ನೋಂದಾಯಿತ ಕಾರು, 15 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೇ ಆರೋಪಿಗಳು ಕುತ್ತಾರಿನ ದೆಕ್ಕಾಡು ಪ್ರದೇಶದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದರು. ಅಲ್ಲದೇ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನರಿಂಗಾನದ ತೌಡುಗೋಳಿ ನಿವಾಸಿ 40 ವರ್ಷದ ಅಬ್ದುಲ್ ಅಝೀಜ್ ಅಲಿಯಾಸ್, ಮತ್ತು 34 ವರ್ಷದ ಹಫೀಝ್ ಸೇರಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿ, ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು