Friday, September 20, 2024
ಹೆಚ್ಚಿನ ಸುದ್ದಿ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ನೇತಾಜಿ ಜನ್ಮದಿನ ಹಾಗೂ ಪರಾಕ್ರಮ ದಿನದ ಆಚರಣೆ-ಕಹಳೆ ನ್ಯೂಸ್

“ರಾಷ್ಟ್ರಕ್ಕೆ ನೇತಾಜಿಯ ಅದಮ್ಯ ನೇತಾಜಿಯ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸುವ ಮತ್ತು ನೆನಪಿಸುವ ಸಲುವಾಗಿ, ವಿಶೇಷವಾಗಿ ಯುವಕರಿಗೆ ಸ್ಪೂರ್ತಿ ನೀಡುವ ಸಲುವಾಗಿ ಈ ವರ್ಷದಿಂದ ಪ್ರತಿ ವರ್ಷ ಜನವರಿ 23 ರಂದು “ಪರಾಕ್ರಮ ದಿನ” ಎಂದು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಈ ಹಿನ್ನಲೆಯಲ್ಲಿ ದಿನಾಂಕ 23/01/2021 ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ನೇತಾಜಿ ಜನ್ಮದಿನ ಹಾಗೂ ಪರಾಕ್ರಮ ದಿನವನ್ನು ಆಚರಿಸಲಾಯಿತು. “ನೇತಾಜಿ ಪ್ರತಿಕೂಲ ಪರಿಸ್ಥಿತಿಯಲ್ಲಿ ಧೈರ್ಯದಿಂದ ವರ್ತಿಸಿದ್ದು ಅವರ ಮಾದರಿಯಲ್ಲೇ ದೇಶಭಕ್ತಿಯ ಉತ್ಸಾಹವನ್ನು ತುಂಬುವ ಉದ್ದೇಶ ಇದರ ಹಿಂದಿದೆ. ರಾಷ್ಟ್ರನಿರ್ಮಾಣದ ಜವಬ್ದಾರಿಯುತ ಸ್ಥಾನದಲ್ಲಿದ್ದು ರಾಷ್ಟ್ರಹಿತಕ್ಕೆ ಧಕ್ಕೆಯಾಗುವ ಯಾವುದೇ ವಿಷಯಗಳಲ್ಲಿ ದುರ್ಬಲನೀತಿ ಹೊಂದಿರಬಾರದೆಂಬುದು ಸುಭಾಷ್‍ರ ದಿಟ್ಟ ನಿಲುವಿನ ಪ್ರತಿಧ್ವನಿಯಾಗಿತ್ತು. ಇದನ್ನು ನಮ್ಮ ಜೀವನದಲ್ಲಿ ನಾವೆಲ್ಲರೂ ಅನುಸರಿಸೋಣ” ಎಂದು ಶ್ರೀರಾಮ ಪ್ರಾಥಮಿಕ ಶಾಲೆಯ ಆಂಗ್ಲಾಭಾಷ ಶಿಕ್ಷಕಿಯಾದ ರಾಜೇಶ್ವರಿ ಎಂ ರವರು ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ಅಜಾದ್ ಹಿಂದ್ ಪೌಜ್ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನದಂದು ಮಾತನಾಡುತ್ತಾ ಹೇಳಿದರು. 7ನೇ ತರಗತಿಯ ಗಗನ್ ಪ್ರೇರಣಾ ಗೀತೆ ಹಾಡಿದನು. ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇಲ್ಲಿಯ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ಸಂಸ್ಥಾಪಕರದ ಡಾ. ಕೆ. ಪ್ರಭಾಕರ್ ಭಟ್ ಉಪಸ್ಥಿತರಿದ್ದರು.