Recent Posts

Monday, January 20, 2025
ಪುತ್ತೂರು

ವಿವೇಕಾನಂದ ಕಾಲೇಜಿನನಲ್ಲಿ ‘ಜಾಗೃತಿ’ ವಾರ್ಷಿಕ ಸಂಚಿಕೆ ಬಿಡುಗಡೆ ಕಾರ್ಯಕ್ರಮ,ವಾರ್ಷಿಕ ಸಂಚಿಕೆ ಕಾಲೇಜಿನ ವಾರ್ಷಿಕ ಪ್ರಗತಿಯನ್ನು ಪ್ರತಿನಿಧಿಸುತ್ತದೆ; ಮಹೇಶ್ ನಿಟಿಲಾಪುರ-ಕಹಳೆ ನ್ಯೂಸ್

ಪುತ್ತೂರು : ಕಾಲೇಜಿನ ನಿಯಮ ಹಾಗೂ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳನ್ನು ಪ್ರಕಟಿಸಲು ಕಾಲೇಜಿನ ವಾರ್ಷಿಕ ಸಂಚಿಕೆ ಅತ್ಯಗತ್ಯ. ಇದರಿಂದ ವಿದ್ಯಾರ್ಥಿಗಳ ಬರವಣಿಗೆ ಕೌಶಲ್ಯವು ಅನಾವರಣಗೊಳ್ಳಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಮಹೇಶ್ ನಿಟಿಲಾಪುರ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯಲ್ಲಿ ನಡೆದ ಕಾಲೇಜಿನ ವಾರ್ಷಿಕ ಸಂಚಿಕೆ ‘ಜಾಗೃತಿ’ ಬಿಡುಗಡೆ ಸಮಾರಂಭದಲ್ಲಿ, ಸಂಚಿಕೆಯನ್ನು ಲೋಕಾರ್ಪಣೆಗೊಳಿಸಿ ಶುಕ್ರವಾರ ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಸೇಡಿಯಾಪು ಜನಾರ್ಧನ್ ಭಟ್ ಮಾತನಾಡಿ, ವಿದ್ಯಾರ್ಥಿಗಳನ್ನು ಜಾಗೃತರನ್ನಾಗಿ ಮಾಡುವಲ್ಲಿ ಪತ್ರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ತಂತ್ರಜ್ಞಾನಯುಗದಲ್ಲಿ ಕೃಷಿಯತ್ತ ಒಲವು ಕಡಿಮೆಯಾಗಿದೆ. ಆ ನಿಟ್ಟಿನಲ್ಲಿ ಕೃಷಿಗೆ ಪೂರಕವಾದ ಲೇಖನಗಳನ್ನು ನಿಯತಕಾಲಿಕೆ ಪ್ರಕಟಿಸಿದಾಗ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹೆಚ್ಚಿಸಬಹುದು ಎಂದು ಅಭಿಪ್ರಾಯಪಟ್ಟರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ ವಾರ್ಷಿಕ ಸಂಚಿಕೆಯ ಸಂಪಾದಕ ವೃಂದಕ್ಕೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಸ್ನಾತಕೋತ್ತರ ವಿಭಾಗಗಳ ಸಂಯೋಜಕಿ ಡಾ. ವಿಜಯ ಸರಸ್ವತಿ ಉಪಸ್ಥಿತರಿದ್ದರು. ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಅಡಿಗ ಪ್ರಾರ್ಥಿಸಿದರು. ಕಾಲೇಜಿನ ಆಂಗ್ಲ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಹೊಸಮನೆ ಸ್ವಾಗತಿಸಿ, ಹಿಂದಿ ವಿಭಾಗದ ಮುಖ್ಯಸ್ಥೆ ಡಾ.ದುರ್ಗಾರತ್ನ ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ್ ಎಂ. ಪ್ರಸ್ತಾವಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು