Recent Posts

Monday, January 20, 2025
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಾಲೇಜಿನ ಕುರಿತಾಗಿ ಮಾಹಿತಿ ನೀಡುವ ಕಾರ್ಯಕ್ರಮ ಬುಧವಾರ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್, ನೂತನ ವಿದ್ಯಾರ್ಥಿಗಳಿಗೆ, ಕಾಲೇಜಿನ ಕಾರ್ಯಚಟುವಟಿಕೆ, ಅನುಶಾಸನ, ಧ್ಯೇಯ ಹಾಗೂ ವಿದ್ಯಾರ್ಥಿಗಳಿಗೆ ಲಭ್ಯವಿರುವ ಅವಕಾಶಗಳ ಕುರಿತಾಗಿ ಮಾಹಿತಿಯನ್ನು ನೀಡಿ ಶುಭಹಾರೈಸಿದರು. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಮಾಹಿತಿಗಳನ್ನು ನೀಡಲಾಯಿತು. ಈ ಸಂದರ್ಭ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ದೈಹಿಕ ಶಿಕ್ಷಣ ನಿರ್ದೇಶಕರು ಉಪಸ್ಥಿತರಿದ್ದರು.