Recent Posts

Monday, January 20, 2025
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ಚಟುವಟಿಕೆಗಳಿಗೆ ಚಾಲನೆ-ಕಹಳೆ ನ್ಯೂಸ್

ಪುತ್ತೂರು : ತ್ಯಾಗ ಮಾಡದೆ ಉನ್ನತ ಮಟ್ಟದ ಸಾಧನೆ ಅಸಾಧ್ಯ. ವಿದ್ಯಾರ್ಥಿಗಳು ತ್ಯಾಗಭರಿತ ಮನೋಭಾವನೆಯಿಂದ ರಾಷ್ಟ್ರೀಯ ಸೇವಾ ಯೋಜನೆಯಂತಹ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದು ಭವಿಷ್ಯದ ದಿಕ್ಕನ್ನು ನಿರ್ಧರಿಸಬಲ್ಲುದು ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಕಾಲೇಜಿನ ಸಭಾಭವನದಲ್ಲಿ ಜನವರಿ22ರಂದು ರಾಷ್ಟ್ರೀಯ ಸೇವಾ ಯೋಜನೆಯ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ, ಮಾತನಾಡಿದರು. ಎನ್ನೆಸ್ಸೆಸ್ ಅನ್ನುವ ಸಂಘಟನೆಯು ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ಹೊಂದಿದೆ. ಇದರಲ್ಲಿ ಹಮ್ಮಿಕೊಳ್ಳುವ ಎಲ್ಲಾ ರೀತಿಯ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಭಾಗವಹಿಸಬೇಕು. ಆ ಮೂಲಕ ಆತ್ಮವಿಶ್ವಾಸ, ನಾಯಕತ್ವ ಗುಣ,ಧನಾತ್ಮಕ ಚಿಂತನೆ ಮತ್ತು ಮನೋಧೈರ್ಯವನ್ನು ಹೆಚ್ಚಿಸಿಕೊಳ್ಳಬೇಕು. ಎನ್ನೆಸ್ಸೆಸ್ ಸ್ವಯಂಸೇವಕರು ಹುಮ್ಮಸ್ಸಿನಿಂದ ಕೈಗೊಳ್ಳುವ ಸ್ವಚ್ಛತೆಯಂತಹ ಚಟುವಟಿಕೆಗಳು ಇತರರಿಗೆ ಮಾದರಿಯಾಗಿರುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ವಿಜಯ ಕುಮಾರ್ ಮೊಳೆಯಾರ ಮಾತನಾಡಿ, ಮಾನವನ ಬದುಕಿನಲ್ಲಿ ಸೇವಾ ಮನೋಭಾವನೆ ಬಹಳ ಮುಖ್ಯ. ಸಾಮಾಜಿಕ ಋಣ ತೀರಿಸಲು ಎನ್ನೆಸ್ಸೆಸ್ ಒಂದು ಉತ್ತಮ ವೇದಿಕೆ. ಎನ್ನೆಸ್ಸೆಸ್‍ನಿಂದ ಶಿಸ್ತು, ಸಂಘಟನಾ ಚತುರತೆ, ವ್ಯಕ್ತಿತ್ವ ವಿಕಸನ, ಸಹಬಾಳ್ವೆ, ಸಮಾಜಮುಖಿ ಚಿಂತನೆ, ಆತ್ಮತೃಪ್ತಿ ಮೊದಲಾದ ಉತ್ತಮ ಅಂಶಗಳನ್ನು ಮೈಗೂಡಿಸಿಕೊಳ್ಳಬಹುದು. ಎನ್ನೆಸ್ಸೆಸ್ ಸ್ವಯಂಸೇವಕರು ಗ್ರಾಮೀಣ ಪ್ರದೇಶದ ಜನರೊಂದಿಗೆ ಬೆರೆತು ಬಾಳುವ ಗುಣ ಬೆಳೆಸಿಕೊಳ್ಳಬೇಕು. ಆ ಮೂಲಕ ಸಿಗುವ ಸಂತೋಷ, ಅನುಭವ ಮಹತ್ತರವಾದುದು. ಅವಕಾಶ ಎಲ್ಲರಿಗೂ ಸಿಗಲಾರದು. ಅವಕಾಶಗಳು ಬಂದೊದಗಿದಾಗ ಸಮರ್ಪಕವಾಗಿ ಬಳಸಿಕೊಳ್ಳುವುದು ಜಾಣತನ ಎಂದರು. ಅಖಿಲಾ ಮತ್ತು ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ದಿನಕರ ಅಂಚನ್ ಸ್ವಾಗತಿಸಿದರು. ವೇದಿಕೆಯಲ್ಲಿಕಾರ್ಯಕ್ರಮಾಧಿಕಾರಿ ಶಶಿಪ್ರಭಾ ಬಿ ಉಪಸ್ಥಿತರಿದ್ದರು. ಸ್ವಯಂಸೇವಕರಾದ ದೀರಜ್ ವಂದಿಸಿ, ಸಹನಾ ಪಿ ಜಿ ಕಾರ್ಯಕ್ರಮ ನಿರೂಪಿಸಿದರು.