Saturday, November 23, 2024
ಹೆಚ್ಚಿನ ಸುದ್ದಿ

ಚೇಳ್ಯಾರು ತಡೆಗೋಡೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿ ಎಂ.ಆರ್.ಪಿ.ಎಲ್ ಕಾಲನಿ ಜನರ ಸಮಸ್ಯೆ ಆಲಿಸಿದ ಶಾಸಕ ಉಮಾನಾಥ್ ಕೋಟ್ಯಾನ್ – ಕಹಳೆ ನ್ಯೂಸ್

ಚೇಳ್ಯಾರು: ಪೋರ್ಡೆ ನಂದಿನಿ ನದಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ಚೇಳ್ಯಾರು ಕಾಲನಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬಗ್ಗೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಜಾಹೀರಾತು
ಜಾಹೀರಾತು
ಜಾಹೀರಾತು

ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಈ ಬಗ್ಗೆ ಪರಿಶೀಲನೆ ನಡಸಿದ ಶಾಸಕರು ನಂತರ ಚೇಳ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂ.ಆರ್.ಪಿ.ಎಲ್ ಕಾಲನಿಯಲ್ಲಿ ಅನೇಕರಿಗೆ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪಂಚಾಯತ್ ಮತ್ತು ಸಾರ್ವಜನಿಕರ ದೂರಿನ ಮೇರೆಗೆ ಶಾಸಕರು ಭೇಟಿ ನೀಡಿ ಶೀಘ್ರವೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮೂಲ್ಕಿ ಮೂಡಬಿದ್ರೆ ಮಂಡಲದ ಅಧ್ಯಕ್ಷರಾದ ಸುನೀಲ್ ಅಳ್ವ, ಚೇಳ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾದ ಜಯಾನಂದ, ಪುಷ್ಪರಾಜ್ ಶೆಟ್ಟಿ, ಮಾಜಿ ಸದಸ್ಯ ಸುರೇಶ್ ಸಾಲ್ಯಾನ್, ಮೂಲ್ಕಿ ನಗರ ಪಂಚಾಯತ್ ಸದಸ್ಯ ಶೈಲೇಶ್ ಕುಮಾರ್, ಬಿಜೆಪಿ ಮುಖಂಡರಾದ ದಿವಾಕರ ಸಾಮಾನಿ,ವಿಶ್ವನಾಥ ಅಚಾರ್ಯ,ವಾಮನ ಪೂಜಾರಿ,ಸೋಮನಾಥ, ಪ್ರಕಾಶ್ ಶೆಟ್ಟಿ ಮಧ್ಯ ಮುಂತಾದವರು ಉಪಸ್ಥಿತರಿದ್ದರು.