ಕೊರಟಗೆರೆ: ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಕಾರಿಪುರ ಕ್ರಾಸ್ಸಿನ ಬಳಿ ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ ವೇಳೆ 20 ಲೀ. ಸೇಂದಿಯನ್ನು ವಶಕ್ಕೆ ಪಡೆದ ಅಬಕಾರಿ ಪೊಲೀಸರ ತಂಡ.
ಶನಿವಾರ ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಸೇಂದಿ ಸಾಗಾಟವಾಗುತ್ತಿದ್ದು, ಈ ವೇಳೆ ಖಚಿತ ಮಾಹಿತಿ ಆಧರಿಸಿ ಅಬಕಾರಿ ಇಲಾಖೆಯ ಅಧಿಕಾರಿ ವರ್ಗ ದಾಳಿ ನಡೆಸಿದೆ. ರಾಜ್ಯದಲ್ಲಿ ನಿಷೇಧಿತ ಸೇಂದಿ ಮಾರಾಟ ಮಾಡಿದ್ದಕ್ಕಾಗಿ ದಾಳಿ ನಡೆಸಿದ ಪೊಲೀಸ್ ತಂಡ 42 ಸಾವಿರ ಮೌಲ್ಯದ ದ್ವಿಚಕ್ರ ವಾಹನ ಮತ್ತು 20 ಲೀ ಸೇಂದಿಯನ್ನು ವಶಕ್ಕೆ ಪಡೆದಿದೆ. ದಾಳಿಯ ವೇಳೆ ಆರೋಪಿಗಳು ಸ್ಥಳದಿಂದ ಪರಾರಿ ಆಗಿದ್ದಾರೆ. ಈ ದಾಳಿಯಲ್ಲಿ ಕೊರಟಗೆರೆ ಅಬಕಾರಿ ನೀರಿಕ್ಷಕ ರಾಮಮೂರ್ತಿ, ಪೇದೆಗಳಾದ ರಂಗಧಾಮಯ್ಯ, ಮಲ್ಲಿಕಾರ್ಜುನ್, ಮೊರಖಂಡಿ, ಮಂಜುಳ, ಮಧುಸೂದನ್, ಕೊಂಡಪ್ಪ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.