ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ನೇರವೇರಿಸಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್
ಪುತ್ತೂರು : ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಮುರುಂಗಿಯಲ್ಲಿ 2020-21 ನೇ ಸಾಲಿನ ಲೆಕ್ಕಶೀರ್ಷಿಕೆ ಡಿಸ್ಟ್ರಿಕ್ಟ್ ಮತ್ತು ಅದರ್ ರೋಡ್ ವಿಶೇಷ ಘಟಕ ಎಸ್.ಪಿ.ಸಿ ಯೋಜನೆಯಡಿ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಹಾಗೂ ನಾರಾಜಿಮೂಲೆ ಕೆಳಗಿನಮನೆ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣ 24 ಲಕ್ಷ ರೂ. ರಸ್ತೆ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವನ ಮಠಂದೂರು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಪ್ರಮುಖರಾದ ಶ್ರೀ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀ ಮುರಳಿ ಕೃಷ್ಣ ಹಸಂತಡ್ಕ, ಪಂಚಾಯತ್ ಸದಸ್ಯರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಊರ ನಾಗರೀಕರು ಉಪಸ್ಥಿತರಿದ್ದರು.