ಬೆಂಗಳೂರು: ಮೋರ್ಚಾದ ರಾಜ್ಯ ಅಧ್ಯಕ್ಷ ಮುಝಮ್ಮಿಲ್ ಅಹ್ಮದ್ ಬಾಬು ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕಾರಿಣಿಯ ಈ ಬಾರಿಯ ಸದಸ್ಯರನ್ನಾಗಿ ೨೭ ಮಂದಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇದರಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣದ ಸದಸ್ಯರಾಗಿರುವ ಸಂದೀಪ್ ಲೋಬೋ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.