ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 72ನೇ ಗಣರಾಜ್ಯೋತ್ಸವ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್
ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೆ, ಸಂಸ್ಥೆಯ ತತ್ವಗಳು ಮತ್ತು ವಿವೇಕಾನಂದರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಬೆಂಗಳೂರಿನ ಜನರಲ್ ಕರ್ನಾಟಕ ಸರ್ಕಾರದ ಹೆಚ್ಚುವರಿ ವಕೀಲರಾದ ಶ್ರೀ ಅರುಣ ಶ್ಯಾಮ್ ಹೇಳಿದರು, ವಿವೇಕಾನಂದ ಕಾನೂನು ಕಾಲೇಜು, ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ, ನ್ಯೂ ಡೆಲ್ಲಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ಪ್ರೇರಣಾ ಎಂಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಸಂವಿಧಾನ ಇರುವುದರಿಂದ ಸಮಾಜ ಅಜಾಗರೂಕತೆ ಇಲ್ಲದೆ ಇದೆ. ಹಾಗಾಗಿ ಕಾನೂನು ವಿದ್ಯಾರ್ಥಿಗಳು ಕಾನೂನಿನ ಜೊತೆಗೆ ಸಮಾಜದ ಏಳಿಗೆಗೆ ಕೈಜೋಡಿಸಬೇಕೆಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ವಕೀಲರಾದ ಸುಧೀರ್ ಕುಮಾರ್ ತೋಳ್ಪಾಪಾಡಿಯ “ಸಾಕ್ಷ್ಯದ ಕಾನೂನು” ಎಂಬ ಪುಸ್ತಕವನ್ನು ಕಲ್ಲಡ್ಕ ಪ್ರಭಾಕರ್ ಭಟ್ ಬಿಡುಗಡೆಗೊಳಿಸಿ, ಸನ್ಮಾನಿಸಿದರು. ಇದರ ಜೊತೆಗೆ ಬೆಂಗಳೂರಿನ ಹೆಚ್ಚುವರಿ ವಕೀಲ ಜನರಲ್ ಕರ್ನಾಟಕ ಸರ್ಕಾರ ಅರುಣ ಶ್ಯಾಮ್‍ರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಮಾತಾನಾಡಿದ ವಿವೇಕಾನಂದ ಕಾನೂನು ಕಾಲೇಜಿನ ಹಳೆಯ ವಿದ್ಯಾರ್ಥಿಯಾದ ಸುಧೀರ್ ಕುಮಾರ್ ತೋಳ್ಪಾಪಾಡಿಯವರು ಒಬ್ಬ ಕಾನೂನು ವಿದ್ಯಾರ್ಥಿ ಕಾನೂನಿನ ಜೊತೆಗೆ ಮನುಷ್ಯನ ವರ್ತನೆಯ ಬಗ್ಗೆ ಅಧ್ಯಯನ ಮಾಡುತ್ತಾನೆ . ಆದ್ದರಿಂದ ಆತ ಮೊದಲು ಹೇಗೆ, ಏನು, ಯಾಕೆ ಎನ್ನುದನ್ನು ಅರಿತುಕೊಂಡರೆ ಮಾತ್ರ, ಸಂಪೂರ್ಣವಾಗಿ ಕಾನೂನಿನ ಬಗ್ಗೆ ತಿಳಿಯಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಮಾತನಾಡಿ, ಭಾರತವು ಪ್ರಜಾಪ್ರಭುತ್ವ ದೇಶವಾಗಿದೆ. ಕಾನೂನು ವಿದ್ಯಾರ್ಥಿಗಳು ಕಾನೂನನ್ನು ಕಲಿಯುವುದರ ಜೊತೆಗೆ ಪ್ರಜೆಗಳಿಗೆ ಅದರ ಬಗ್ಗೆ ಅರಿವು ಮೂಡಿಸಬೇಕು. ಆಗ ಮಾತ್ರ ದೇಶ ಅಭಿವೃದ್ಧಿ ಕಡೆಗೆ ಹೆಚ್ಚೆ ಹಾಕಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ವಿಶ್ವೇಶ್ವರ ಭಟ್, ಪುತ್ತೂರಿನ ಬಾರ್ ಅಸೋಸಿಯೇಷನ್ ಅಧ್ಯಕ್ಷ ಮನೋಹರ್ ಕೆ.ವಿ, ವಿವೇಕಾನಂದ ಕಾನೂನು ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ವಕೀಲರಾದ ದೀಪಕ್ ಬೊಲ್ವರ್ , ಕಾನೂನು ಅಧ್ಯಯನದ ನಿರ್ದೇಶಕ ಡಾ. ಬಿ.ಕೆ. ರವೀಂದ್ರ ಮತ್ತು ವಕೀಲ ಅರವಿಂದ್ ವಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿವೇಕಾನಂದ ಕಾನೂನು ಕಾಲೇಜಿನ ವಿದ್ಯಾರ್ಥಿ ಗಾಯತ್ರಿ ಮತ್ತು ಬಳಗದವರು ಪ್ರಾರ್ಥಿಸಿ, ಪ್ರಾಂಶುಪಾಲ ಅಕ್ಷತಾ ಎ.ಪಿ ಸ್ವಾಗತಿಸಿದ್ರು, ಉಪನ್ಯಾಸಕಿ ಸಂಗೀತ ಎಸ್.ಎಮ್. ವಂದಿಸಿ, ಆಂಗ್ಲ ಉಪನ್ಯಾಸಕಿ ಸಂಧ್ಯಾ ಪಿ.ಎಮ್ ಮತ್ತು ಕಾನೂನು ಉಪನ್ಯಾಸಕಿ ಹಿತ ದೇಚಮ್ಮ ಕಾರ್ಯಕ್ರಮವನ್ನು ನಿರೂಪಿಸಿದರು.